CET 2020: ಪರೀಕ್ಷಾ ಕೇಂದ್ರ ಮತ್ತು ಮಾಹಿತಿ ಬದಲಾಯಿಸಲು ಅವಕಾಶ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಯೇ ಸಿಇಟಿ ಪರೀಕ್ಷೆ. ಸಿಇಟಿ-2020 ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ಮತ್ತು ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯಲ್ಲಿನ ಮಾಹಿತಿ ಬದಲಾವಣೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.

ಸಿಇಟಿ: ಮಾಹಿತಿ ಬದಲಾಯಿಸಿಕೊಳ್ಳಲು ಅವಕಾಶ

ಸಿಇಟಿ-2020 ಪರೀಕ್ಷೆಯನ್ನು ಜುಲೈ 30, 31, 2020 ರಂದು ನಡೆಸಲಾಗುವುದು ಎಂದು ಇಲಾಖೆಯು ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಕೊರೋನಾ ಸಮಸ್ಯೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಸಮೀಪವಿರುವ ಸ್ಥಳಗಳಲ್ಲೇ ಸಿಇಟಿ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಡಲು ಸಿದ್ಧತೆ ನಡೆಸಲಾಗುತ್ತಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸದಾಗಿ ಸೇರ್ಪಡೆ ಮಾಡಿದ ಸ್ಥಳಗಳನ್ನು ಪರಿಶೀಲಿಸಿ ನಂತರ ಅಗತ್ಯವಿದ್ದಲ್ಲಿ ಅಭ್ಯರ್ಥಿಗಳು ಈ ಮೊದಲು ನೀಡಿದ್ದ ಪರೀಕ್ಷಾ ಕೇಂದ್ರವನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ ಹಾಗೂ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆದ್ಯತೆಯ ಮೇರೆಗೆ ಮೂರು ಆಯ್ಕೆಗಳನ್ನು ನೀಡಬಹುದಾಗಿದೆ. ಅಭ್ಯರ್ಥಿಯು ನೀಡುವ ಆದ್ಯತೆ ಮತ್ತು ಪರೀಕ್ಷಾ ಕೇಂದ್ರದ ಲಭ್ಯತೆಯ ಆಧಾರದ ಮೇಲೆ ಪರೀಕ್ಷಾ ಕೇಂದ್ರವನ್ನು ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳ ಬದಲಾವಣೆ ಮಾಡಿಕೊಳ್ಳುವುದಿದ್ದಲ್ಲಿ ಮತ್ತು ಅರ್ಜಿಗಳಲ್ಲಿನ ಮಾಹಿತಿಯನ್ನು ಬದಲಾಯಿಸುವುದಿದ್ದಲ್ಲಿ ಇಂದು ಸಂಜೆ 6 ರಿಂದ ಮೇ 22,2020 ರ ಸಂಜೆ 6ರ ವರೆಗೆ ಅವಕಾಶ ನೀಡಲಾಗಿರುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
provision to change exam center and editing application for cet 2020 exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+