ಪಿಯುಸಿ ಪರೀಕ್ಷೆ: ಸಾಮಾಜಿಕ ಜಾಲತಾಣ ಬಳಸದಂತೆ ಶಿಕ್ಷಣ ಇಲಾಖೆ ಸೂಚನೆ

ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಸದಂತೆ ಹಾಗು ಸಾಮಾಜಿಕ ಜಾಲತಾಣಗಳ ಕಡೆಗೆ ಗಮನ ಕೊಡದಂತೆ ಪ್ರಿನ್ಸಿಪಾಲರು ಹಾಗೂ ಪೋಷಕರು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕೆಂದು ಇಲಾಖೆ ತಿಳಿಸಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳೆಯಲ್ಲಿ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ

ಇಂದು ಸಾಮಾಜಿಕ ಜಾಲತಾಣಗಳನ್ನು ಪರೀಕ್ಷೆ ಅಕ್ರಮಗಳಿಗೆ ಬಳಸಿಕೊಳ್ಳುತ್ತಿದ್ದು, ವಾಟ್ಸಾಪ್ ಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆ ಹಾವಳಿ ಹೆಚ್ಚಾಗಿದೆ. ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಅನಗತ್ಯ ತೊಂದರೆಯಿಂದ ಪಾರಾಗಲು ವಾಟ್ಸಾಪ್ ಬಳಸದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದೆ.

ಪಿಯು ಉಪನ್ಯಾಸಕರ ನೇಮಕಾತಿ ಪರೀಕ್ಷಾ ವೇಳಾಪಟ್ಟಿ ಪ್ರಕಟಪಿಯು ಉಪನ್ಯಾಸಕರ ನೇಮಕಾತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ವಾಟ್ಸಾಪ್ ಬಳಸದಂತೆ ಶಿಕ್ಷಣ ಇಲಾಖೆ ಸೂಚನೆ

ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಸದಂತೆ ಹಾಗು ಸಾಮಾಜಿಕ ಜಾಲತಾಣಗಳ ಕಡೆಗೆ ಗಮನ ಕೊಡದಂತೆ ಪ್ರಿನ್ಸಿಪಾಲರು ಹಾಗೂ ಪೋಷಕರು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕೆಂದು ಇಲಾಖೆ ತಿಳಿಸಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ -1983ಕ್ಕೆ 2017ರಲ್ಲಿ ಮಾಡಿರುವ ತಿದ್ದುಪಡಿ ಪ್ರಕಾರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆಯನ್ನು ಹಂಚುವುದು ಅಪರಾಧವಾಗಿದೆ. ಪ್ರಶ್ನೆ ಪತ್ರಿಕೆ ಪಡೆಯುವವರು ಕೂಡಾ ಶಿಕ್ಷೆಗೆ ಆರ್ಹರಾಗುತ್ತಾರೆ.

ಈ ಹಿಂದೆ ನಡೆದಿದ್ದ ನಕಲಿ ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆ ಹಿನ್ನೆಲೆಯಲ್ಲಿ ಪೋಷಕರು ಹಾಗೂ ಅಧ್ಯಾಪಕರ ಸಭೆ ನಡೆಸಿ ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ಕಾಲೇಜುಗಳ ಪ್ರಿನ್ಸಿಪಾಲರಿಗೆ ಸೂಚಿಸಿದ್ದಾರೆ.

ಸೆಕ್ಷನ್ 24ಎ ಪ್ರಕಾರ .ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆಯನ್ನು ಹಂಚುವುದು ಅಪರಾಧವಾಗಿದೆ. ಅಂತೆಯೇ ಪರೀಕ್ಷಾ ಸಂದರ್ಭದಲ್ಲಿ ಅಥವಾ ಪರೀಕ್ಷೆಗೂ ಮುನ್ನಾ ಯಾವುದೇ ವ್ಯಕ್ತಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದು, ಅಥವಾ ಮಾರಾಟ, ಕೊಳ್ಳುವುದು ಕೂಡಾ ಶಿಕ್ಷಾರ್ಹ ಅಪರಾಧವಾಗಲಿದೆ.

ಕಳೆದ ಸಾಲಿನ ಪರೀಕ್ಷೆಯಲ್ಲಿ ಶಿಕ್ಷಕರೇ ವಾಟ್ಸಾಪ್ ಮೂಲಕ ಪ್ರಶ್ನೆಪತ್ರಿಕೆ ರವಾನೆ ಮಾಡಿ ಸಿಕ್ಕಿಬಿದ್ದಿದ್ದರು. ಈ ಬಾರಿ ಇಂತಹ ಅಕ್ರಮಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಪ್ರಶ್ನೆ ಪತ್ರಿಕೆ ಸೋರಿಕೆ, ನಕಲಿ ಪ್ರಶ್ನೆ ಪತ್ರಿಕೆ ಗಳಿಂದ ವಿದ್ಯಾರ್ಥಿಗಳು ವಿಚಲಿತರಾಗುತ್ತಾರೆ, ಇದು ಅವರ ಓದಿನ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ ಎನ್ನುವ ಉದ್ದೇಶದಿಂದ ಇಲಾಖೆ ಈ ರೀತಿಯ ಸೂಚನೆ ನೀಡಿದೆ.

For Quick Alerts
ALLOW NOTIFICATIONS  
For Daily Alerts

English summary
The Pre-University Education Department has suggested that PUC students stay away from social networking sites at the time of exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X