PU Lecturers Protest: ಪಿಯು ಉಪನ್ಯಾಸಕರ ನೇಮಕಾತಿ ಕುರಿತು ಶಿಕ್ಷಣ ಸಚಿವರ ಭರವಸೆ

ಪಿಯು ಉಪನ್ಯಾಸಕರ ನೇಮಕಾತಿ ವಿಚಾರಕ್ಕೆ ಧರಣಿ ಕುಳಿತಿರುವ ಉಪನ್ಯಾಸಕರನ್ನು ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಪಿಯು ಉಪನ್ಯಾಸಕರ ನೇಮಕಾತಿ ಕುರಿತು ಸಚಿವರ ಸ್ಪಷ್ಟನೆ

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು ಪಿಯುಸಿ ಉಪನ್ಯಾಸಕರಾಗಿ ಆಯ್ಕೆಗೊಂಡಿರುವ ಮತ್ತು ಕೌನ್ಸೆಲಿಂಗ್ ಸಹ ಪೂರ್ಣವಾಗಿರುವ ಉಪನ್ಯಾಸಕರು ನೇಮಕಾತಿ ಆದೇಶಕ್ಕಾಗಿ ಧರಣಿ ಕೂತಿರುವ ವಿಚಾರ ನನಗೆ ತಿಳಿದುಬಂದಿದೆ.
ನಾನು ಆಸ್ಪತ್ರೆಯಲ್ಲಿ ದಾಖಲಾಗಿರುವುದರಿಂದ ಈ ಮೂಲಕ ಕೆಲವು ವಿಚಾರಗಳನ್ನು ಸ್ಪಷ್ಟಗೊಳಿಸುತ್ತೇನೆ. ನನ್ನ ಪ್ರತಿ ಪ್ರಯತ್ನ ಈ ಎಲ್ಲಾ ನೂತನ ಉಪನ್ಯಾಸಕರಿಗೆ ತಿಳಿದಿದೆ. ಆರ್ಥಿಕ ಇಲಾಖೆಯ ನಿರ್ಬಂಧ ಇದ್ದರೂ ಸಹ‌ ಇವರೆಲ್ಲರಿಗೂ ಕೌನ್ಸೆಲಿಂಗ್ ಪ್ರಕ್ರಿಯೆ ಸಹ ಪೂರ್ಣಗೊಳಿಸಲಾಗಿದೆ. ಈಗ ಕಾಲೇಜುಗಳು ಪ್ರಾರಂಭವಾದ ತಕ್ಷಣ ನೇಮಕಾತಿ ಆದೇಶ ಕೊಡಲಾಗುವುದು ಎಂದು ಈ ಎಲ್ಲಾ ನೂತನ ಉಪನ್ಯಾಸಕರುಗಳಿಗೆ ಮುಂಚೆಯೇ ತಿಳಿಸಲಾಗಿತ್ತು ಎಂದಿದ್ದಾರೆ.‌

ಉಪನ್ಯಾಸಕರಾಗಿ ಆಯ್ಕೆಯಾಗಿ ಒಂದು ವರ್ಷದ ಒಳಗೆ ನೇಮಕಾತಿ ಆದೇಶ ದೊರೆಯದಿದ್ದರೆ ಆ ಆಯ್ಕೆ ಪಟ್ಟಿ ರದ್ದಾಗುತ್ತದೆ ಎಂಬ ಆತಂಕ ಈ ನೂತನ ಉಪನ್ಯಾಸಕರಿಗಿದೆ. ಆದರೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಯಾವುದೇ ಉಪನ್ಯಾಸಕರ ಹುದ್ದೆಗಳಿಗೆ ತೊಂದರೆಯಾಗದಂತೆ ಅಗತ್ಯ ತಿದ್ದುಪಡಿ ಬೇಕಾದರೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
education minister suresh kumar gives assurance to pu lecturers who are doing protest.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X