ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5ರಂದು ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಸುತ್ತೋಲೆ ಹೊರಡಿಸಿದೆ. ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪ್ರಥಮ ಪಿಯುಸಿ ಫಲಿತಾಂಶವನ್ನು ಮೇ.5ಕ್ಕೆ ಪ್ರಕಟಿಸಲಾಗುತ್ತಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರ ನಿರ್ದೇಶನದಂತೆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು ಮಟ್ಟದಲ್ಲಿಯೇ ನಿರ್ವಹಿಸಲು ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದು ತಿಳಿಸಿದೆ.
ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು ಎಂದು ತಿಳಿಸಿರುತ್ತದೆ.
ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಪೋಷಕರು ಕಂತುಗಳ ಮೂಲಕ ಕಾಲೇಜು ಶುಲ್ಕ ಪಾವತಿಸಲು ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು. 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ. ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.


Click it and Unblock the Notifications











