Guidelines for PUC Classes : ಕಾಲೇಜು ಆರಂಭ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ವರ್ಷದ ಬಳಿಕ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಆರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

 
ಪಿಯುಸಿ ತರಗತಿ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪಿಯು ಬೋರ್ಡ್

ದೇಶದೆಲ್ಲೆಡೆ ಕೊರೋನಾ ಸೋಂಕು ಹಬ್ಬಿರುವ ಹಿನ್ನೆಲೆಯಲ್ಲಿ ವರ್ಷದಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಆದರೂ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯನ್ನು ಎರಡು ದಿನಗಳ ಕಾಲ ವಿಭಿನ್ನ ಮಾದರಿಯಲ್ಲಿ ನಡೆಸಲಾಗಿತ್ತು. ಆದರೆ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಮಾಡಿ ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಫಲಿತಾಂಶವನ್ನು ತಿರಸ್ಕರಿಸಿದ 18 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಗಸ್ಟ್ 19 ರಿಂದ ಸೆಪ್ಟೆಂಬರ್ 3ರ ವರೆಗೆ ನಡೆಯುವ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಅನೇಕ ಪರ-ವಿರೋಧಗಳ ನಡುವೆಯೂ ಇದೀಗ ಪಿಯು ಕಾಲೇಜುಗಳನ್ನು ಆಗಸ್ಟ್ 23ರಿಂದ ಪ್ರಾರಂಭಿಸುವುದಾಗಿ ತಿಳಿಸಿದೆ. ಕೊರೋನಾ ಕಾರಣದಿಂದಾಗಿ ಕಾಲೇಜು ಆರಂಭಕ್ಕೆ ಎಚ್ಚರಿಕೆಯಿಂದ ಸೂಕ್ತ ಮಾರ್ಗಸೂಚಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿ ಏನಿದೆ ಎನ್ನುವುದನ್ನು ಇಲ್ಲಿ ತಿಳಿಯಿರಿ.

* ಮೊದಲನೆಯದಾಗಿ ಕೊರೋನಾ ಸೋಂಕಿನ ಪಾಸಿವಿಟಿ ದರವು ಶೇ.2ಕ್ಕಿಂತ ಕಡಿಮೆ ಇರುವ ಪ್ರದೇಶದಲ್ಲಿ ಕಾಲೇಜು ಆರಂಭಿಸಬೇಕು.

* ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿಗಳ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ.

* ಕಾಲೇಜುಗಳಲ್ಲಿ ವಾರದ ಮೊದಲ ಮೂರು ದಿನಗಳು ಭೌತಿಕ ತರಗತಿಗಳು ನಡೆಯಲಿವೆ. ಅಂದರೆ ಸೋಮವಾರ, ಮಂಗಳವಾರ ಮತ್ತು ಬುಧವಾರ ಮಾತ್ರ ಭೌತಿಕ ತರಗತಿಗಳು ನಡೆಯಲಿವೆ.

* ಒಂದು ವೇಳೆ ವಿದ್ಯಾರ್ಥಿಯು ಭೌತಿಕವಾಗಿ ತರಗತಿಗೆ ಹಾಜರಾಗಲು ಇಚ್ಚಿಸದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಬೇಕು.

 

* ಆನ್‌ಲೈನ್ ತರಗತಿಗಳಿಗೂ ಹಾಜರಾಗದ ವಿದ್ಯಾರ್ಥಿಗಳಿಗೆ ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ಭೌತಿಕ ತರಗತಿಗಳು ಶೇ.೫೦ರಷ್ಟು ಅನುಪಾತದಲ್ಲಿ ನಡೆಯಲಿವೆ.

* ೧೦೦ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇರುವ ಕಾಲೇಜುಗಳಲ್ಲಿ ವಿಶಾಲವಾರ ಕೊಠಡಿ ಇದ್ದಲ್ಲಿ ವಾರಪೂರ್ತಿ ಭೌತಿಕ ತರಗತಿಗಳನ್ನು ನಡೆಸಲು ಅನುಮತಿ ಇದೆ.

* ವಿದ್ಯಾರ್ಥಿಗಳ ಹಾಜರಾತಿಯನ್ನು ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ಕಡ್ಡಾಯಗೊಳಿಸುವುದು.

* ಕಾಲೇಜು ಆವರಣದಲ್ಲಿ ಮಾಸ್ಕ್ ಕಡ್ಡಾಯ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕು. ವಿದ್ಯಾರ್ಥಿಗಳ ಗುಂಪು ಗೂಡುವಿಕೆಗೆ ಅವಕಾಶವಿಲ್ಲ. ಕನಿಷ್ಟ ೬ ಅಡಿಗಳ ಭೌತಿಕ ಅಂತರ ಕಾಯ್ದುಕೊಳ್ಳಬೇಕು.

* ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಮತ್ತು ಇತರೆ ಚಟುವಟಿಕೆಗಳನ್ನು ನಡೆಸುವ ವೇಳೆ ಆರೋಗ್ಯ ಇಲಾಖೆಯಿಂದ ಬಿಡುಗಡೆ ಮಾಡಿರುವ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು.

* ಕಾಲೇಜು ಆವರಣಗಳಲ್ಲಿ ಪ್ರತಿನಿತ್ಯ ಕೊಠಡಿ, ಕಾರಿಡಾರುಗಳನ್ನು ಸ್ಯಾನಿಟೈಸ್ ಮಾಡಬೇಕು. ಆವರಣದಲ್ಲಿ ಸಂಗ್ರಹಿಸಿರುವ ತ್ಯಾಜ್ಯವನ್ನು ಮೂರು ದಿನಗಳೊಳಗೆ ವಿಲೇವಾರಿ ಮಾಡಬೇಕು.

* ಅನಾರೋಗ್ಯ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು.

* ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಆಗಾಗ್ಗೆ ಸೋಪಿನಿಂದ ಕೈಗಳನ್ನು ತೊಳೆಯುತ್ತಿರಬೇಕು.

* ಉಪನ್ಯಾಸಕರಿಗೆ, ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ.

* ೫೧ ವರ್ಷ ಮೇಲ್ಪಟ್ಟ್ ಉಪನ್ಯಾಸಕರಿಗೆ ಮಾಸ್ಕ್ ಜೊತೆಗೆ ಫೇಸ್‌ಗಾರ್ಡ್ ಬಳಸಲು ಸೂಚನೆ ನೀಡಲಾಗಿದೆ.

* ವಿದ್ಯಾರ್ಥಿಗಳಿಗೆ ಅಗತ್ಯವಿರುವ ಹೆಲ್ಪ್‌ಲೈನ್ ಮತ್ತು ಆಸ್ಪತ್ರೆ ದುರವಾಣಿ ಸಂಖ್ಯೆಗಳನ್ನು ಶಾಲಾ ಆವರಣದಲ್ಲಿ ಪ್ರಕಟಿಸಬೇಕು.

* ಶಾಲಾ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್ ಇದ್ದರೆ ಅದನ್ನು ಸಂಪೂರ್ಣವಾಗಿ ಮುಚ್ಚಬೇಕು. ಸ್ವಿಮ್ಮಿಂಗ್ ಪೂಲ್ ಬಳಕೆಗೆ ಅನುಮತಿ ಇಲ್ಲ.

For Quick Alerts
ALLOW NOTIFICATIONS  
For Daily Alerts

English summary
Karnataka Colleges Reopening :1st and 2nd PUC classes starting from august 23. Govt released SOPs and Guidelines for colleges reopening, Read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X