ಜುಲೈ ಅಂತ್ಯಕ್ಕೆ ಪಿಯುಸಿ ಮತ್ತು ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ

ರಾಜ್ಯಾದ್ಯಂತ ಕೊರೋನಾ ಸಮಸ್ಯೆ ನಡುವೆಯೂ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಜುಲೈ ತಿಂಗಳ ಅಂತ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮತ್ತು ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶ ಬಿಡುಗಡೆ ಯಾವಾಗ ?

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರೀಕ್ಷೆಗಳ ಫಲಿತಾಂಶವು ಜುಲೈ ತಿಂಗಳ ಅಂತ್ಯದಲ್ಲಿ ಮತ್ತು ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಪ್ರಕಟಿಸಲು ಸಿದ್ದತೆಗಳು ನಡೆಯುತ್ತಿವೆ. ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಆನ್ ಲೈನ್ ಶಿಕ್ಷಣ ಬಗ್ಗೆ ಕೇಂದ್ರ ಸರ್ಕಾರದ ತಾತ್ಕಾಲಿಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆನ್‌ ಲೈನ್ ಶಿಕ್ಷಣದ ಬಗ್ಗೆ ರಾಜ್ಯ ಸರ್ಕಾರ ರಚಿಸಿರುವ ತಜ್ಞರ ಸಮಿತಿ ವರದಿ ಸಲ್ಲಿಸಿದ ಬಳಿಕ ಎಲ್ಲ ವಯೋಮಾನದ ವಿದ್ಯಾರ್ಥಿಗಳ ಅವಶ್ಯಕತೆಗನುಗುಣವಾಗಿ ಅಧಿಕೃತ ಮಾರ್ಗದರ್ಶಿಯನ್ನು ಸಿದ್ಧಪಡಿಸಲಾಗುವುದು ಎಂದರು.

ಶಾಲಾ ಕಾಲೇಜು ಆರಂಭದ ಬಗ್ಗೆ‌ ಸರ್ಕಾರ‌ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಬಾರಿ ಯಾವುದೇ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡುವಂತಿಲ್ಲ. ಒಂದು ವೇಳೆ ಶುಲ್ಕ ಹೆಚ್ಚಳ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
puc results will anounce in end of july and sslc result will anounce in first week of august said by minister s. suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+