ಇನ್ನೊಂದು ವಾರದಲ್ಲಿ ಪಿಯುಸಿ ಫಲಿತಾಂಶ

Posted By:

ಮೇ 10ರಂದು ಪಿಯು ಫಲಿತಾಂಶ, ನಂತರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸುತ್ತೇವೆ. ಸದ್ಯ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಫಲಿತಾಂಶ ದಿನಾಂಕದ ಘೊಷಣೆ ಸದ್ಯ ಅಸಾಧ್ಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ಏಪ್ರಿಲ್ 5 ರಿಂದ ರಾಜ್ಯಾದ್ಯಂತ 48 ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಿತ್ತು. ಸುಮಾರು 37 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿದ್ದು 21 ಸಾವಿರ ಉಪನ್ಯಾಸಕರು ಮೌಲ್ಯಮಾಪನದಲ್ಲಿ ಭಾಗಿಯಾಗಿದ್ದರು.

ಮಾರ್ಚ್ 9 ರಿಂದ ಮಾರ್ಚ್ 27 ರವರೆಗೆ ಪಿಯು ಪರೀಕ್ಷೆಗಳು ನಡೆದಿದ್ದವು. 11 ಭಾಷೆ, 23 ವಿಷಯ ಮತ್ತು 50 ಸಂಯೋಜನೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆ ಬರೆದಿದ್ದು ಅವರೆಲ್ಲರ ಭವಿಷ್ಯ ಮೇ 10ಕ್ಕೆ ಹೊರಬೀಳಲಿದೆ.

ಮೇ 10ಕ್ಕೆ ಪಿಯುಸಿ ಫಲಿತಾಂಶ

ಈ ಬಾರಿಯ ಮೌಲ್ಯಮಾಪನದಲ್ಲಿ 21 ಸಾವಿರ ಉಪನ್ಯಾಸಕರು ಭಾಗಿಯಾಗಲಿದ್ದಾರೆ. ವಿವಿಧ ವಿಷಯಗಳ 21 ಸಾವಿರ ಉಪನ್ಯಾಸಕರನ್ನು ಮೌಲ್ಯಮಾಪನಕ್ಕೆ ನಿಯೋಜಿಸಲಾಗಿದ್ದು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳ ಉಪನ್ಯಾಸಕರೂ ಇದರಲ್ಲಿ ಸೇರಿದ್ದಾರೆ.

ಮೇ 10 ಕ್ಕೆ ಫಲಿತಾಂಶ

ನಿಗದಿತ ಸಮಯಕ್ಕೆ ಮೌಲ್ಯಮಾಪನವು ನಡೆದಿದ್ದು ಈಗಗಾಲೇ ಅಂತಿಮ ಹಂತದ ಕಾರ್ಯಗಳು ನಡೆಯುತ್ತಿವೆ. ಮೇ 10 ಕ್ಕೆ ಪಿಯುಸಿ ಫಲಿತಾಂಶ ಪ್ರಕಟಗೊಳ್ಳುವುದು ಬಹುತೇಕ ಖಚಿತವಾಗಿದೆ.

ಪಿಯು ನಂತರ ಎಸ್ ಎಸ್ ಎಲ್ ಸಿ ಫಲಿತಾಂಶ

ಪಿಯುಸಿ ಫಲಿತಾಂಶ ಪ್ರಕಟಗೊಂಡ ಒಂದೆರೆಡು ದಿನಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವು ಪ್ರಕಟವಾಗುವುದು ಎಂದು ಸಚಿವರು ಹೇಳಿದ್ದಾರೆ. ದಿನಾಂಕವನ್ನು ಸ್ಪಷ್ಟಪಡಿಸಿದ ಅವರು ಮೌಲ್ಯಮಾಪನವು ಮುಕ್ತಾಯ ಹಂತದಲ್ಲಿದ್ದು ಪಿಯುಸಿ ಫಲಿತಾಂಶದ ಬೆನ್ನಲ್ಲೇ ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆಗೊಳಿಸುವುದಾಗಿ ಹೇಳಿದರು.

ಎಸ್ ಎಸ್ ಎಲ್ ಸಿ ಮೌಲ್ಯಮಾಪನವು ಏಪ್ರಿಲ್ 20 ರಿಂದ ಆರಂಭವಾಗಿದ್ದು 225 ಕೇಂದ್ರಗಳನ್ನು ಬಳಸಿಕೊಳ್ಳಲಾಗಿದೆ. ಒಟ್ಟು 2770 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಈ ಬಾರಿ 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ 4.69 ಲಕ್ಷ ಬಾಲಕರು ಹಾಗೂ 4.07 ಲಕ್ಷ ಬಾಲಕಿಯರಿದ್ದಾರೆ.

ಹೆಚ್ಚು ಮೌಲ್ಯಮಾಪನ ಕೇಂದ್ರಗಳು

ಈ ಬಾರಿಯ ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ರಾಜ್ಯದ 225 ಕಡೆ ಮೌಲ್ಯಮಾಪನ ಕೇಂದ್ರಗಳನ್ನು ಗುರುತಿಸಲಾಗಿದ್ದು, 33 ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರತಿ ವಿಷಯಕ್ಕೆ ಒಂದು ಮೌಲ್ಯಮಾಪನ ಕೇಂದ್ರವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ವಿದ್ಯಾರ್ಥಿಗಳು ಇರುವ ಕಡೆ ಹೆಚ್ಚಿನ ಕೇಂದ್ರಗಳನ್ನು ಗುರುತಿಸಲಾಗಿದ್ದು ಫಲಿತಾಂಶವನ್ನು ಬೇಗ ನೀಡುವ ಉದ್ದೇಶದಿಂದ ಹೆಚ್ಚಿನ ಶಿಕ್ಷಕರನ್ನು ಮೌಲ್ಯಮಾಪನಕ್ಕೆ ಬಳಸಿಕೊಳ್ಳಲಾಗಿದೆ. ಇದಕ್ಕಾಗಿ 68,567 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

English summary
The Department of Pre-University Education (PUE), Karnataka is likely to declare the results for the class 12 examinations next week.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia