ಆರ್‌ಬಿಐ ಗ್ರೇಡ್ ಬಿ ಅಧಿಕಾರಿ ಹುದ್ದೆಗಳ ಆನ್‌ಲೈನ್ (ಫೇಸ್-I) ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆರ್‌ಬಿಐ ಒಟ್ಟು 199 ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 11,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಅರ್ಜಿದಾರರನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು ಎಂದು ತಿಳಿಸಲಾಗಿದ್ದು, ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿರುತ್ತದೆ.ಅಭ್ಯರ್ಥಿಗಳು ನವೆಂಬರ್ 9,2019ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಆರ್‌ಬಿಐ ನ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ opportunities@rbi ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ current vacancies ನ ಕೆಳಗೆ ಇರುವ call letter ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು call letter ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 6: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ಹಾಗೂ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗತಕ್ಕದ್ದು, ಪರೀಕ್ಷೆಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಳತಕ್ಕದ್ದು.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











