RBI: ಸಹಾಯಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆರ್‌ಬಿಐ ಸಹಾಯಕ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಆರ್‌ಬಿಐ ಇದೇ ಫೆಬ್ರವರಿ 14 ಮತ್ತು 15,2020ರಂದು ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ಆರ್ ಬಿಐ ಸಹಾಯಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಅನುಸರಿಸಿ :

ಸ್ಟೆಪ್ 1: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆರ್ ಬಿಐನ ಅಧಿಕೃತ ವೆಬ್‌ಸೈಟ್‌ https://www.rbi.org.in/ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Current Vacancies ನಲ್ಲಿ Call Letter ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಅಭ್ಯರ್ಥಿಗಳು ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪರದೆಯ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಒಂದು ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Reserve Bank Of India 2020 released preliminary examination admit card for assistant posts in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X