ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಫೆಬ್ರವರಿ 17,2022 ರಿಂದ ಮಾರ್ಚ್ 8,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅವಕಾಶ ನೀಡಲಾಗಿತ್ತು ಜೊತೆಗೆ ಅಭ್ಯರ್ಥಿಗಳು ಯಾವ ಪ್ರಾದೇಶಿಕ ಕೇಂದ್ರದಲ್ಲಿ ನೇಮಕಾತಿ ಬಯಸುತ್ತಾರೋ, ಅಲ್ಲಿನ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು ಮತ್ತು ಮಾತನಾಡಲು ತಿಳಿದಿರಬೇಕು.
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರಾಗಿದ್ದರು. ಓಬಿಸಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 14,650/- ರಿಂದ 34,990/-ರೂ ವೇತನ ಜೊತೆಗೆ ಇತರೆ ಭತ್ಯೆಯನ್ನು ನೀಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಪ್ರಿಲಿಮಿನರಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅದರನ್ವಯ ಪ್ರಿಲಿಮಿನರಿ ಪರೀಕ್ಷೆಯನ್ನು ಮಾರ್ಚ್ 26 ಮತ್ತು 27,2022ರಂದು ನಿಗದಿಪಡಿಸಲಾಗಿದ್ದು, ಪರೀಕ್ಷೆಯ ಪ್ರವೇಶ ಪತ್ರವನ್ನು ಕೂಡ ಬಿಡುಗಡೆ ಮಾಡಲಾಗಿತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ನೋಡಿ.
ಆರ್‌ಬಿಐ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :
ಸ್ಟೆಪ್ 1: ಅಭ್ಯರ್ಥಿಗಳು ಆರ್‌ಬಿಐ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.