ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಫೆಬ್ರವರಿ 17,2022 ರಿಂದ ಮಾರ್ಚ್ 8,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಆರ್‌ಬಿಐ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಓಬಿಸಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 14,650/- ರಿಂದ 34,990/-ರೂ ವೇತನ ಜೊತೆಗೆ ಇತರೆ ಭತ್ಯೆಯನ್ನು ನೀಡಲಾಗುವುದು.
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಪ್ರಿಲಿಮಿನರಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯನ್ನು ಮಾರ್ಚ್ 26 ಮತ್ತು 27,2022ರಂದು ನಡೆಸಲಾಗಿರುತ್ತದೆ. ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವಿಂದು ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಆರ್‌ಬಿಐ ಸಹಾಯಕ ಹುದ್ದೆಗಳ ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಆರ್‌ಬಿಐ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಪಿಡಿಎಫ್ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಪಿಡಿಎಫ್ ನಲ್ಲಿ ತಮ್ಮ ರೋಲ್ ನಂಬರ್ ಅನ್ನು ಹುಡುಕಿ. ನಂತರ ಲಭ್ಯವಾದಲ್ಲಿ ನೀವು ಉತ್ತೀರ್ಣರಾಗಿರುತ್ತೀರಿ ಎಂದರ್ಥ
ಸ್ಟೆಪ್ 5 : ಪಿಡಿಎಫ್ ಅನ್ನು ಸೇವ್ ಮಾಡಿಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.