ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗ್ರೇಡ್ ಬಿ ಅಧಿಕಾರಿ ಹುದ್ದೆಗಳ ನೇಮಕಾತಿಯ ಸಂದರ್ಶನ ಪ್ರಕ್ರಿಯೆಯನ್ನು ಮುಂದೂಡಿದೆ. ದೇಶದಾದ್ಯಂತ ಕೊರೋನಾ ಸೋಂಕು ಭೀತಿಯಿಂದಾಗಿ ಲಾಕ್ಡೌನ್ ವಿಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆರ್ಬಿಐ ಈ ನಿರ್ಧಾರವನ್ನು ಕೈಗೊಂಡಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 199 ಗ್ರೇಡ್ ಬಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಇದೇ ಮೇ 4 ರಿಂದ 7,2020 ರವರೆಗೆ ನಡೆಸುವುದಾಗಿ ತಿಳಿಸಿತ್ತು. ಆದರೆ ಸಂದರ್ಶನ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆರ್ಬಿಐ ಅಧಿಕೃತ ವೆಬ್ಸೈಟ್ ಅನ್ನು ವೀಕ್ಷಿಸತಕ್ಕದ್ದು ಎಂದು ತಿಳಿಸಿದೆ.
ಅಭ್ಯರ್ಥಿಗಳು ಸಂದರ್ಶನ ಮುಂದೂಡಿಕೆಯ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts