ಅಡುಗೆಯವರು, ಅಡುಗೆ ಸಹಾಯಕರು ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 5,000 (ಡಿ ಗ್ರೂಪ್) ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ವಿಧಾನಸೌಧದಲ್ಲಿ ಬುಧವಾರ ನಡೆದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಖಾಲಿ ಇರುವ ಹುದ್ದೆಗಳ ಭರ್ತಿಯ ಸೂಚನೆ ನೀಡಿದರು.
ಎಸ್ ಎಸ್ ಎಲ್ ಸಿ ಕಡ್ಡಾಯ
'ಡಿ' ಗ್ರೂಪ್ ನೌಕರರಿಗೆ ಎಸ್ ಎಸ್ ಎಲ್ ಸಿ ಕಡ್ಡಾಯ ಮಾಡಲಾಗಿದೆ. ಅಡುಗೆಯವರು, ಅಡುಗೆ ಸಹಾಯಕರು ಮತ್ತಿತರ 'ಡಿ'ದರ್ಜೆ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ಶೈಕ್ಷಣಿಕ ಅರ್ಹತೆ ಅಗತ್ಯವಿಲ್ಲ, ಈ ಹಿಂದೆ ವಿದ್ಯಾರ್ಹತೆಯನ್ನು ಪರಿಗಣಿಸದೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈ ಬಾರಿಯಿಂದ ವಿದ್ಯಾರ್ಹತೆ ಇದ್ದರೆ ಮಾತ್ರ ಆಯ್ಕೆ ಮಾಡುವುದಾಗಿ ತಿಳಿಸಲಾಗಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆಯನ್ನು ನಿಗದಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ವಿಧಾನ ಮಂಡಲದ ಉಭಯ ಸದನದಲ್ಲಿ ಚರ್ಚೆ ನಡೆದಿತ್ತು. ಅಂತಿಮವಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಆಧಾರದ ಮೇಲೆ ನೇಮಕ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಸಭೆ ನಿರ್ಧರಿಸಿತು.
ಖಾಲಿ ಇರುವ ಹುದ್ದೆಗಳ ವಿವರ
ಹುದ್ದೆ | ಸಂಖ್ಯೆ |
ಅಡುಗೆಯವರು | 3291 |
ಅಡುಗೆ ಸಹಾಯಕರು | 2577 |
ರಾತ್ರಿ ಕಾವಲುಗಾರರು | 716 |
ಜವಾನರು | 29 |
ಒಟ್ಟು | 6613 |
ಪಾರದರ್ಶಕ ನೇಮಕಕ್ಕೆ ವಿದ್ಯಾರ್ಹತೆ
ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು ಮತ್ತು ಜವಾನರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಗೆ ಎಸ್ಸೆಸ್ಸೆಲ್ಸಿ ತೇರ್ಗಡೆಯಾಗಿರಬೇಕು ಎಂಬ ಅರ್ಹತೆ ನಿಗದಿಪಡಿಸಿದ್ದಕ್ಕೆ ವಿಧಾನಮಂಡಲ ಉಭಯ ಸದನಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನೇಮಕ ಪ್ರಕ್ರಿಯೆ ತಡೆಹಿಡಿಯಲ್ಪಟ್ಟಿತ್ತು. ಅರ್ಹತೆ ಮಾನದಂಡದಲ್ಲಿ ಪಾರದರ್ಶಕತೆಗಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆಯೇ ಪರಿಗಣನೆ ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಯಿತು.