ಜೂನ್ 10, ಪಿಯು ಉಪನ್ಯಾಸಕ ಹುದ್ದೆಗೆ ಶುಲ್ಕ ಪಾವತಿಸಲು ಕೊನೆಯ ದಿನ

Posted By:

ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ 2015ರಲ್ಲಿ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿ ಮಾಡದವರು ಜೂನ್ 5ರಿಂದ 10ರೊಳಗೆ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಶುಲ್ಕ ಪಾವತಿಸಲು ಸೂಚಿಸಲಾಗಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು " ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) ನಿಯಮಗಳು 2013 " ರ ಅನ್ವಯ ಅರ್ಹ ಅಭ್ಯರ್ಥಿಗಳಿಂದ ದಿನಾಂಕ 08-05-2015 ರಂದು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಆಯ್ಕೆ ಪ್ರಕ್ರಿಯೆಯನ್ನು ಕಾರಣಾಂತರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ನಂತರ ಮುಂದುವರೆಸಲಾಗಿತ್ತು. ಆದರೆ ಆಯ್ಕೆ ಪ್ರಕ್ರಿಯೆಯನ್ನು ಹೇಗಿತ್ತೋ ಹಾಗೆ ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು.

2015ರಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸಿ, 1,204 ಹುದ್ದೆಗಳ ನೇಮಕಾತಿಗೆ ಕಳೆದ ಮಾರ್ಚ್‌ನಲ್ಲಿ ಮತ್ತೊಮ್ಮೆ ಅಧಿಸೂಚನೆ ಹೊರಡಿಸಿತ್ತು.

ಪಿಯು ಉಪನ್ಯಾಸಕರ ನೇಮಕಾತಿ

2015ರಲ್ಲಿ ಮತ್ತು ಈಗ ಹೊಸದಾಗಿ ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿರುವ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್‌ಸೈಟ್‌ನಲ್ಲಿ kea.kar.nic.in ಪ್ರಕಟಿಸಿದೆ.

ಪ್ರಮುಖ ದಿನಾಂಕ

  • ಜೂನ್ 10, ಶುಲ್ಕ ಪಾವತಿಸಲು ಕೊನೆಯ ದಿನಾವಾಗಿದೆ.
  • ಅರ್ಜಿಯಲ್ಲಿ ಯಾವುದೇ ಮಾಹಿತಿಯನ್ನು ತಪ್ಪಾಗಿ ನಮೂದಿಸಿದ್ದರೆ ಅದನ್ನು ಆನ್‌ಲೈನ್‌ ಮೂಲಕವೇ ಸರಿಪಡಿಸಲು ಜೂನ್ 11ರಿಂದ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

2015ರ ಅಧಿಸೂಚನೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೀಗ ಎಂಟು ಜಿಲ್ಲೆಗಳಲ್ಲಿ ಮಾತ್ರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯುತ್ತದೋ, ಅದರಲ್ಲಿ ಒಂದು ಕೇಂದ್ರ ನಮೂದಿಸುವಂತೆ ಪ್ರಾಧಿಕಾರದ ಪ್ರಕಟಣೆ ಸೂಚಿಸಿದೆ.

ವಯೋಮಿತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಗಳು ಮತ್ತು ಇತ್ಯಾದಿ ಮಾನದಂಡಗಳು, ಈ ಮೊದಲು ಹೊರಡಿಸಿದ ಅಧಿಸೂಚನೆ ಅನ್ವಯ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 08 -05 -2015 ರ ಅಧಿಸೂಚನೆ ಪ್ರಕಾರ ನಿರ್ಧರಿಸಲಾಗುವುದು. ಹಾಗೂ ಈ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 28 -02 -2017 ರ ಅಧಿಸೂಚನೆ ಪ್ರಕಾರ ನಿರ್ಧರಿಸಲಾಗುತ್ತದೆ. ವಿವಿಧ ವಿಷಯಗಳ 1204 ಹುದ್ದೆಗಳ ಹೊಸ ವರ್ಗೀಕರಣದ ಹಂಚಿಕೆಯ ವಿವರಗಳನ್ನು ಪ್ರಾಧಿಕಾರದ ವೆಬ್ಸೈಟ್ kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ

English summary
June 10, is the last date to submit fees for the Recruitment for the post of Lecturers in Government PU Colleges in the State of Karnataka.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia