ಪಿಯು ಕಾಲೇಜು ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅರ್ಜಿ ಆಹ್ವಾನ

Posted By:

ಪಿಯು ಕಾಲೇಜು ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು " ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) ನಿಯಮಗಳು 2013 " ರ ಅನ್ವಯ ಅರ್ಹ ಅಭ್ಯರ್ಥಿಗಳಿಂದ ದಿನಾಂಕ 08-05-2015 ರಂದು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಆಯ್ಕೆ ಪ್ರಕ್ರಿಯೆಯನ್ನು ಕಾರಣಾಂತರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ನಂತರ ಮುಂದುವರೆಸಲಾಗಿತ್ತು. ಆದರೆ ಆಯ್ಕೆ ಪ್ರಕ್ರಿಯೆಯನ್ನು ಹೇಗಿತ್ತೋ ಹಾಗೆ ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು.

ಪ್ರಸ್ತುತ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇವರು ತಮ್ಮ ಪತ್ರ ದಿನಾಂಕ 16-12-2016 ಮತ್ತು 25-02-2017 ರಲ್ಲಿ ಉಪನ್ಯಾಸಕರ ನೇಮಕಾತಿ ಕುರಿತಂತೆ ಸರ್ಕಾರವು ಅನುಮತಿಸಿದೆಯೆಂದು ಪ್ರಾಧಿಕಾರಕ್ಕೆ ತಿಳಿಸಿ 20 ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 1203 ಉಪನ್ಯಾಸಕರ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಕೋರಿರುತ್ತಾರೆ.

ಆನ್ಲೈನ್ ಅರ್ಜಿ ಸಲ್ಲಿಸುವ ದಿನಾಂಕ

ಅರ್ಜಿ ಪ್ರಕ್ರಿಯೆ ಪ್ರಾರಂಭ: 07-03-2017

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2017

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10-04-2017

ಉಪನ್ಯಾಸಕ ಹುದ್ದೆಗಳ ನೇಮಕಾತಿ

ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕವನ್ನು ಪಾವತಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಸದರಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿನಾಂಕ 08 -05 -2015 ಮತ್ತು 13 -06 -2016 ರ ಸಮಸಂಖ್ಯೆಯ ಅಧಿಸೂಚನೆಯಲ್ಲಿ ನಿಗದಿ ಪಡಿಸಿರುವ ಎಲ್ಲಾ ಅರ್ಹತೆ, ಸೂಚನೆ ಮತ್ತು ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದನ್ನು ಅಭ್ಯರ್ಥಿಗಳು ದಯವಿಟ್ಟು ಗಮನಿಸಬಹುದಾಗಿದೆ. ಆದ್ದರಿಂದ ಆಸಕ್ತಿಯುಳ್ಳ ಎಲ್ಲ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ದಿನಾಂಕ 07-03-2017 ರಿಂದ 06-04-2017 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ನಿಗದಿತ ಶುಲ್ಕವನ್ನು ದಿನಾಂಕ 10-04-2017 ರೊಳಗಾಗಿ ಪಾವತಿಸಬೇಕು.

ವಯೋಮಿತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಗಳು ಮತ್ತು ಇತ್ಯಾದಿ ಮಾನದಂಡಗಳು, ಈ ಮೊದಲು ಹೊರಡಿಸಿದ ಅಧಿಸೂಚನೆ ಅನ್ವಯ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 08 -05 -2015 ರ ಅಧಿಸೂಚನೆ ಪ್ರಕಾರ ನಿರ್ಧರಿಸಲಾಗುವುದು. ಹಾಗೂ ಈ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 28 -02 -2017 ರ ಅಧಿಸೂಚನೆ ಪ್ರಕಾರ ನಿರ್ಧರಿಸಲಾಗುತ್ತದೆ. ವಿವಿಧ ವಿಷಯಗಳ ೧೨೦೩ ಹುದ್ದೆಗಳ ಹೊಸ ವರ್ಗೀಕರಣದ ಹಂಚಿಕೆಯ ವಿವರಗಳನ್ನು ಪ್ರಾಧಿಕಾರದ ವೆಬ್ಸೈಟ್ http://kea.kar.nic.in/ ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಾಧಿಕಾರದ ವೆಬ್ಸೈಟ್ ವಿಳಾಸದಲ್ಲಿ ಪ್ರಕಟಿಸಲಾಗುವುದು. ಆಫ್ ಲೈನ್ ಅರ್ಜಿಗಳನ್ನು/ ಪೆನ್ ಮತ್ತು ಪೇಪರ್ ಉಪಯೋಗಿಸಿ ಸಲ್ಲಿಸುವ ಅರ್ಜಿ ಪ್ರತಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ವಿವರಗಳಿಗಾಗಿ

ಪ್ರಾಧಿಕಾರದ ವೆಬ್ಸೈಟ್ http://kea.kar.nic.in/  ಗೆ ಭೇಟಿ ನೀಡಿ.

English summary
Recruitment for the Post of Lecturers in PU Colleges

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia