ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ

Posted By:

ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಗೆ ಮತ್ತೆ ಜೀವ ಬಂದಿದೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಮೀಸಲು ನೀತಿಯನ್ನು ಜಾರಿಗೆ ತರಲು ರಾಜ್ಯ ಸರಕಾರ ನಿರ್ಧರಿಸಿದೆ.

ಕನ್ನಡ ಪರ ಸಂಘಟನೆಗಳ ನಿರಂತರ ಹೋರಾಟದ ಫಲವಾಗಿ ರಾಜ್ಯ ಸರಕಾರ ಈಗ ಹೊಸ ಕಾನೂನು ತಿದ್ದಪಡಿ ಜಾರಿಗೆ ತರಲು ಮುಂದಾಗಿದೆ.

 ಕನ್ನಡಿಗರಿಗೆ ಮೀಸಲಾತಿ

ಈಗಾಗಲೇ ಕಾನೂನು ಸಚಿವಾಲಯಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ಕನ್ನಡಿಗರಿಗೆ ಉದ್ಯೋಗ ಎಲ್ಲ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

ಮುಚ್ಚುವ ಹಂತದಲ್ಲಿ ಕೆಎಸ್ಒಯು: ಮೂರು ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಕರ್ನಾಟಕ ಕೈಗಾರಿಕಾ ಉದ್ಯೋಗ ನಿಯಮ 1961 ಕಾನೂನಿಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರಕಾರ 2016ರಲ್ಲಿ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಶೇಕಡ 100ರಷ್ಟು ಉದ್ಯೋಗಾವಕಾಶ ಕಲ್ಪಿಸಲಾಗಿತ್ತು.

ಈ ಪ್ರಸ್ತಾವದ ಕುರಿತು ಅಧ್ಯಯನ ನಡೆಸಲು ಈಗಾಗಲೇ ಅಡ್ವೋಕೇಟ್‌ ಜನರಲ್‌ ಅವರಿಗೆ ಕಡತ ಕಳುಹಿಸಲಾಗಿದ್ದು, ಗ್ರೂಪ್‌ ಸಿ ಮತ್ತು ಡಿ ವರ್ಗದದಲ್ಲಿ ಕನ್ನಡಿಗರಿಗೆ ಶೇಕಡ 100ರಷ್ಟು ಮೀಸಲು ನೀಡುವ ಮೂಲಕ ಉದ್ಯೋಗ ಕಲ್ಪಿಸಲು ನಿರ್ಧರಿಸಲಾಗಿದೆ.

ಇದು ಸಂವಿಧಾನದ ಕೆಲವು ಮೂಲ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ವರದಿ ನೀಡಿದ ಬೆನ್ನಲ್ಲೇ, ಕಾನೂನು, ಕಾರ್ಮಿಕ ಸಚಿವಾಲಯ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪರ್ಯಾಯ ಕ್ರಮಗಳನ್ನು ಕೈಗೊಳ್ಳಲು ಸಮಾಲೋಚನೆ ನಡೆಸಿದ್ದಾರೆ.

ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

1 ರಿಂದ 10ನೇ ತರಗತಿಯವರೆಗೆ ಕನ್ನಡವನ್ನು ಓದಿದವರಿಗೆ ಆದ್ಯತೆ ನೀಡಲು ಅವಕಾಶ ಕಲ್ಪಿಸಲಾಗಿತ್ತು. ನಂತರ ಕನ್ನಡದ ಭಾಷೆಯನ್ನು ಅಧ್ಯಯನ ಮಾಡಿದವರು ಇದರಿಂದ ಅವಕಾಶ ವಂಚಿತರಾಗುತ್ತಾರೆ ಎಂಬ ಅಭಿಪ್ರಾಯ ಕೇಳಿಬಂದ ಹಿನ್ನೆಲೆಯಲ್ಲಿ ಇನ್ನಷ್ಟು ಚರ್ಚೆ ನಡೆಸಲು ನಿರ್ಧರಿಸಲಾಗಿದೆ.

English summary
The State Government has decided to implement the Reservation Policy for providing employment to Kannadigas in the private sector

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia