Sarvepalli Radhakrishnan : ಮಹಾಗುರುವಿನ ಸಾರೋಟನ್ನು ವಿದ್ಯಾರ್ಥಿಗಳೇ ಎಳೆದಿದ್ದರು

ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ ಸಾರೋಟನ್ನು ಪ್ರೀತಿಪೂರ್ವಕವಾಗಿ ಎಳೆದಿದ್ದರು.

By Kavya

ಮಕ್ಕಳ ನೆಚ್ಚಿನ ಹಬ್ಬಗಳಲ್ಲಿ ಟೀಚರ್ಸ್ ಡೇ ಕೂಡಾ ಒಂದು. ಹೌದು ಮನೆಯೇ ಮೊದಲ ಪಾಠ ಶಾಲೆ ಎಂಬ ಮಾತಿದೆ. ಅಮ್ಮ -ಅಪ್ಪನ ನಂತರ ಮಕ್ಕಳು ಹೆಚ್ಚು ಹಚ್ಚಿಕೊಳ್ಳುವುದು ತಮ್ಮ ಟೀಚರ್ಸ್ ಗಳನ್ನ. ಬೇಕಾದ್ರೆ ನೀವೇ ಚೆಕ್ ಮಾಡಿಕೊಳ್ಳಿ ಮಕ್ಕಳ ಬಳಿ ಹೋಗಿ ಮುಂದೆ ನೀವು ಏನು ಆಗ್ತೀರಾ ಎಂದು ಕೇಳಿ ಥಟ್ಟನೆ ಹೇಳುವುದು ಟೀಚರ್ ಎಂದು ಮತ್ತೆ ತಡವರಿಸಿ ಅಪ್ಪ ಅಮ್ಮ ಹೇಳಿ ಕೊಟ್ಟ ಹಾಗೆ ಇಲ್ಲ ಡಾಕ್ಟರ್, ಇಂಜಿನೀಯರ್ ಅಂತಾರೆ. ಇನ್ನು ಈ ಟೀಚರ್ಸ್ ಮಕ್ಕಳ ಜೀವನದಲ್ಲಿ ವಿಶೇಷವಾಗಿ ಪ್ರಭಾವ ಬೀರಿರುತ್ತಾರೆ. ಹಾಗಾಗಿ ಟೀಚರ್ಸ್ ಡೇ ಯಂದು ಮಕ್ಕಳು ತಮ್ಮ ನೆಚ್ಚಿನ ಶಿಕ್ಷಕಿಗೆ ಏನಾದ್ರೂ ಸಪ್ರೈಸ್ ಗಿಫ್ಟ್ ನೀಡಿ ಶುಭ ಹಾರೈಸುತ್ತಾರೆ. ಹಾಗಿದ್ರೆ ಟೀಚರ್ಸ್ ಡೇ ಹಿನ್ನೆಲೆ ನೀವು ತಿಳಿದುಕೊಳ್ಳಲೇ ಬೇಕಲ್ವಾ... ಬನ್ನಿ ಆ ಬಗ್ಗೆ ನಿಮಗೆ ಕೆರಿಯರ್ ಇಂಡಿಯಾ ಮಾಹಿತಿ ನೀಡುತ್ತಿದೆ ಮುಂದಕ್ಕೆ ಓದಿ

ಶಿಕ್ಷಕರ ದಿನಾಚರಣೆ

ಡಾ.ರಾಧಾಕೃಷ್ಣನ್ ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. 'ಡಾ. ಸರ್ವಪಲ್ಲಿ ರಾಧಾಕೃಷ್ಣನ್' 1962 ರಲ್ಲಿ ಭಾರತದ ರಾಷ್ಟ್ರಪತಿಯಾದ ಸಂದರ್ಭದಲ್ಲಿ ಇವರ ಶಿಷ್ಯರು ಮತ್ತು ಸ್ನೇಹಿತರು ಸೆಪ್ಟೆಂಬರ್ 5 ರಂದು ತಮ್ಮ ಹುಟ್ಟಿದ ದಿನವನ್ನು ಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರ ಗೌರವಿಸುತಿದ್ದ ರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಬೇರೆಯಾಗಿಯೇ ಆಚರಿಸುವುದಾದರೆ ಇಂದಿನಿಂದ "ಸೆಪ್ಟೆಂಬರ್ 5"ನ್ನು 'ಶಿಕ್ಷಕರ ದಿನ'ವನ್ನಾಗಿ ಆಚರಿಸಲು ಹೇಳಿದರು. ಅಂದಿನಿಂದ ಅವರ ಜನ್ಮದಿನವನ್ನ ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ.

ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರು ಕುಳಿತ ಸಾರೋಟನ್ನು ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು.

ಸರ್ವಪಲ್ಲಿ ರಾಧಾಕೃಷ್ಣನ್ ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ 'ತಿರುತ್ತಣಿ' ಎಂಬಲ್ಲಿ ಸೆಪ್ಟೆಂಬರ್ 5, 1888 ರಲ್ಲಿ. (ಸರ್ವಪಲ್ಲಿ ರಾಧಾಕೃಷ್ಣನ್ ಅವರ ಪುತ್ರ ಸರ್ವಪಲ್ಲಿ ಗೋಪಾಲ್ ಅವರು ತಮ್ಮ ತಂದೆಯ ಬಗ್ಗೆ ಬರೆದ ಜೀವನಚರಿತ್ರೆಯಲ್ಲಿ ರಾಧಾಕೃಷ್ನನ್ ಅವರ ಜನ್ಮದಿನಾಂಕ 20-09-1887 ಎಂದಿದೆ) ಸರ್ವಪಲ್ಲಿ ಎನ್ನುವುದು ಮನೆತನದ ಹೆಸರಾದರೆ, 'ರಾಧಾಕೃಷ್ಣನ್' ಎನ್ನುವುದು ಅವರ ತಂದೆ-ತಾಯಿ ಇಟ್ಟ ಹೆಸರು.

ಈ ಶಿಕ್ಷಕರುಗಳ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕು! ಈ ಶಿಕ್ಷಕರುಗಳ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕು!

ವಿದ್ಯಾರ್ಥಿ ಜೀವನ

ರಾಧಾಕೃಷ್ಣನ್ ಅವರ ತಂದೆಗೆ ತಮ್ಮ ಮಗನನ್ನು ಪುರೋಹಿತನನ್ನಾಗಿ ಮಾಡುವ ಹಂಬಲವಿತ್ತು. ಬರುವ ದಿನಗೂಲಿಯಲ್ಲಿ ತುಂಬು ಕುಟುಂಬವನ್ನು ಸಾಗಿಸಲು ಕಷ್ಟ ಪಡುವ ಸಂದರ್ಭದಲ್ಲಿ 'ರಾಧಾಕೃಷ್ಣನ್‌'ಗೆ ಓದಬೇಕೆನ್ನುವ ಅಪಾರ ಹಂಬಲ! 'ಸ್ಕಾಲರ್‌ಶಿಪ್ ಹಣ'ದಲ್ಲಿಯೇ ಎಲ್ಲ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದ ರಾಧಾಕೃಷ್ಣನ್, ಮದ್ರಾಸ್‌ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್‌ ನಲ್ಲಿ 'ತತ್ವಜ್ಞಾನ' ವಿಷಯದ ಮೇಲೆ 'ಬಿ.ಎ' ಮತ್ತು 'ಎಂ.ಎ. ಪದವಿ'ಗಳನ್ನು ಪಡೆದು ಕೊಂಡರು.

ಶಿಕ್ಷಕ ವೃತ್ತಿ

'ಸ್ನಾತಕೋತ್ತರ ಪದವಿ'ಯಲ್ಲಿ ರಾಧಾಕೃಷ್ಣನ್ ಮಂಡಿಸಿದ ಪ್ರಬಂಧ 'ದಿ ಎಥಿಕ್ಸ್ ಆಫ್ ವೇದಾಂತ' ಅವರ ಬದುಕಿನ ದಿಕ್ಕನ್ನೇ ಬದಲಾಯಿಸಿತು. ಕೇವಲ 20 ವರ್ಷದ ಬಾಲಕನ ತಲೆಯಲ್ಲಿದ್ದ 'ಹಲವು ಬಗೆಯ ಸಿದ್ಧಾಂತಗಳು', 'ವೇದಾಂತ ವಿಚಾರಗಳು' ಮುಂದೊಂದು ದಿನ ಅವರನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತವೆ, ಎಂದು ಅವರ ಕಾಲೇಜು ಶಿಕ್ಷಕರು ಆಗಲೇ ಗುರುತಿಸಿದ್ದರು

ಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ, ಉಪನಿಷತ್, ಜೈನ ತತ್ವಜ್ಞಾನ, ಶಂಕರ ರಾಮಾನುಜ, ಮಧ್ವ, ಪ್ಲೇಟೋ, ಪ್ಲಾಟಿನಸ್, ಕಾಂತ್, ಬ್ರ್ಯಾಡ್ಲೆ ಮುಂತಾದ ಮಹನೀಯರ ತತ್ವಜ್ಞಾನವನ್ನು ಆಳವಾಗಿ ಅಧ್ಯಯನ ಕೈಗೊಂಡರು. ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಹಂತ ಹಂತವಾಗಿ ಮೇಲೇರುತ್ತಾ ಮುನ್ನಡೆದ ರಾಧಾಕೃಷ್ಣನ್, 1918ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ, ತತ್ವಜ್ಞಾನ ವಿಭಾಗದ ಉಪನ್ಯಾಸಕರಾಗಿ ಆಯ್ಕೆಯಾದರು.

1931 ರಲ್ಲಿ ಆಂಧ್ರ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದ ರಾಧಾಕೃಷ್ಣನ್, ಐದು ವರ್ಷಗಳ ಕಾಲ ತಾವೊಬ್ಬ ಉತ್ತಮ ಶಿಕ್ಷಣ ಸುಧಾರಕರೂ ಹೌದು ಎಂಬುದನ್ನು ತಮ್ಮ ಸೇವಾವಧಿಯಲ್ಲಿ ತೋರಿಸಿಕೊಟ್ಟರು. ಇವರ ಅವಧಿಯಲ್ಲಿ ವಿಶ್ವವಿದ್ಯಾಲಯ ಅನೇಕ ಶಿಕ್ಷಣ ಮತ್ತು ಶಿಕ್ಷಣೇತರ ಸುಧಾರಣೆಗಳನ್ನು ಕಂಡಿತು.

1939 ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, 1948 ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು.

1949ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್‌ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು.

ಅಂತಿಮ ದಿನಗಳು

ತಮ್ಮ 'ರಾಷ್ಟ್ರಪತಿ ಹುದ್ದೆ'ಯ ಅಧಿಕಾರಾವಧಿ ಮುಗಿದ ನಂತರ 1967 ರಲ್ಲಿ ತಮ್ಮ 'ನಿವೃತ್ತಿ ಜೀವನ'ವನ್ನು ಮದ್ರಾಸಿನ 'ಮೈಲಾಪುರ'ದಲ್ಲಿರುವ ತಮ್ಮ ಅಧಿಕೃತ ನಿವಾಸ 'ಗಿರಿಜಾ'ದಲ್ಲಿ ಕಳೆದ ರಾಧಾಕೃಷ್ಣನ್, 1975 ರ ಏಪ್ರಿಲ್ 17 ರಂದು ಇಹಲೋಕದ ಯಾತ್ರೆಯನ್ನು ಮುಗಿಸಿದರು.

For Quick Alerts
ALLOW NOTIFICATIONS  
For Daily Alerts

English summary
Radhakrishnan was awarded several high awards during his life, including a knighthood in 1931, the Bharat Ratna, the highest civilian award in India, in 1954, and honorary membership of the British Royal Order of Merit in 1963. Radhakrishnan believed that "teachers should be the best minds in the country". Since 1962, his birthday is celebrated in India as Teachers' Day on 5 September.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X