ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 6,100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಜುಲೈ 27,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಇದೀಗ ಬಿಡುಗಡೆ ಮಾಡಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಸೆಪ್ಟೆಂಬರ್ 20,2021ರ ವರೆಗೆ ಅವಕಾಶವಿರುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರ ಡೌನ್‌ಲೋಡ್ ಪ್ರಕ್ರಿಯೆಯನ್ನು ತಿಳಿಯಲು ಮುಂದೆ ಓದಿ.
ಎಸ್‌ಬಿಐ ಅಪ್ರೆಂಟಿಸ್ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಅಥವಾ ರೋಲ್ ನಂಬರ್ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಎಸ್‌ಬಿಐ ಅಪ್ರೆಂಟಿಸ್ ಪ್ರವೇಶ ಪತ್ರದ ಜೊತೆಗೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿರುತ್ತದೆ ಎನ್ನುವುದು ಗಮನದಲ್ಲಿರಲಿ.
ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳ ಆನ್‌ಲೈನ್ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











