SBI CBO Online Exam Admit Card 2021 : ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಸಿಬಿಒ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಎಸ್‌ಬಿಐ ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಡಿಸೆಂಬರ್ 9,2021 ರಿಂದ ಡಿಸೆಂಬರ್ 29,2021 ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಡಿಸೆಂಬರ್ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದರು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಸಿಬಿಓ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/-ರೂ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯನ್ನು ಜನವರಿ 23,2022ರಂದು ನಿಗದಿಪಡಿಸಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಸಿಬಿಒ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಎಸ್‌ಬಿಐ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂ/ರೋಲ್ ನಂ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released online exam 2022 admit card for circle based officer posts. Here is How to Download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+