ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ಫಲಿತಾಂಶ ಪ್ರಕಟವಾದ ಬಳಿಕ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಎಸ್ಬಿಐ ಒಟ್ಟು 8000 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 31,2020ರಂದು ಪ್ರಮುಖ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆ ಬರೆದ ಅಭ್ಯರ್ಥಿಗಳ ಫಲಿತಾಂಶವನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ಫಲಿತಾಂಶ ಒಮ್ಮೆ ಪ್ರಕಟಗೊಂಡಲ್ಲಿ ಶಾರ್ಟ್ ಲೀಸ್ಟ್ ನಲ್ಲಿ ಹೆಸರು ಪಡೆದ ಅಭ್ಯರ್ಥಿಗಳು ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಬೇಕಿರುತ್ತದೆ.
ಅಭ್ಯರ್ಥಿಗಳು ತಮ್ಮ ಫಲಿತಾಂಶ ಚೆಕ್ ಮಾಡಿಕೊಳ್ಳುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ವೆಬ್ಸೈಟ್ https://www.sbi.co.in/careers/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ನ ಕೆಳಭಾಗದಲ್ಲಿ ಲಭ್ಯವಿರುವ ರಿಸಲ್ಟ್ ಸೆಕ್ಷನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ರಿಕ್ರುಟ್ಮೆಂಟ್ ಆಫ್ ಜ್ಯೂನಿಯರ್ ಅಸೋಸಿಯೇಟ್ಸ್ ನ ಮುಂದಿರುವ ಫೈನಲ್ ರಿಸಲ್ಟ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ ಮತ್ತು ತಾತ್ಕಾಲಿಕ ಕಾಯ್ದಿರಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಅಭ್ಯರ್ಥಿಗಳು ಚೆಕ್ ಮಾಡಿಕೊಳ್ಳಬಹುದು.