ಎಸ್‌ಬಿಐ ಬ್ಯಾಂಕ್ 2019 ಕ್ಲರ್ಕ್ ಹುದ್ದೆಗಳ ಪಿಇಟಿ ಪ್ರವೇಶ ಪತ್ರ ಬಿಡುಗಡೆ

ಎಸ್‌ಬಿಐ ಬ್ಯಾಂಕ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಲಿಖಿತ ಪರೀಕ್ಷೆಗೆ ಇದೀಗ ಪರೀಕ್ಷಾ ಪೂರ್ವ ತಯಾರಿಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ .

ಎಸ್‌ಬಿಐ 8904 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಮೇ 3 ,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷಾ ಪೂರ್ವ ತಯಾರಿಯ (ಪಿಇಟಿ) ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಜೂನ್ 1 ,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪಿಇಟಿ ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಪಿಇಟಿ  ಪ್ರವೇಶ ಪತ್ರ ಬಿಡುಗಡೆ

ಎಸ್‌ಬಿಐ ಬ್ಯಾಂಕ್ ಕ್ಲರ್ಕ್ ಹುದ್ದೆಗಳ ಪಿಇಟಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಎಸ್‌ಬಿಐ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://www.sbi.co.in/careers/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Recruitment Of Junior Associates " ನ ಕೆಳಗೆ ಕಾಣಿಸುವ "Download Call Letter For Pre Examination Training" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ನಿಮ್ಮ Registration Number ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
SBI has released the pre-exam training admit cards for clerk posts on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X