ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್‌ಬಿಐ 8904 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು. ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಮೇ 3,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಮೇ 28 ರಿಂದ ಜೂನ್ 23 ,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾನ ಅಧಿಕೃತ ವೆಬ್ ಸೈಟ್ https://www.sbi.co.in/careers/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ Latest Announcements ನಲ್ಲಿ ಕಾಣಿಸುವ "Recruitment Of Junior Associates " ನ ಕೆಳಗೆ ಕಾಣಿಸುವ "Download Call Letter For Online Preliminary Examination " ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











