SBI: ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಎಸ್‌ಬಿಐ ಒಟ್ಟು 8000 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 26,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 8000 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಎಸ್‌ಬಿಐ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಇದೀಗ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಎಸ್‌ಬಿಐ ಒಟ್ಟು 8000 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 26,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ರಿಲೀಸ್ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Current Openings ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು "SBI clerk recruitment" ಕೆಳಗೆ ಇರುವ "Download Online Preliminary Exam Call Letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ / ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತರತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI Bank 2020 preliminary examination admit card released for clerk posts in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+