SBI PO Final Result 2022 : ಅಂತಿಮ ಫಲಿತಾಂಶ ವೀಕ್ಷಿಸುವುದು ಹೇಗೆ ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಎಸ್‌ಬಿಐ ನೇಮಕಾತಿ ಪ್ರಕ್ರಿಯೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಎಸ್‌ಬಿಐ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ  ಅಂತಿಮ ಫಲಿತಾಂಶ ಪ್ರಕಟ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಡಿಸೆಂಬರ್ 31,2021ರ ಅನ್ವಯ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 12 ವರ್ಷ ಮತ್ತು ಅಂಗವಿಕಲ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,960/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಮೊದಲ ಹಂತದ ಪ್ರಿಲಿಮಿನರಿ ಪರೀಕ್ಷೆಯು ನವೆಂಬರ್ 20,21 ಮತ್ತು 27,2021 ರಂದು ನಡೆಸಲಾಗಿತ್ತು, ಈಗಾಗಲೇ ಫಲಿತಾಂಶವನ್ನು ಕೂಡ ಬಿಡುಗಡೆ ಮಾಡಲಾಗಿರುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಜನವರಿ 2,2022ರಂದು ಮುಖ್ಯ ಪರೀಕ್ಷೆಯನ್ನು ನಡೆಸಲಾಗಿದೆ, ತದನಂತರ ಸಂದರ್ಶನ ಪ್ರಕ್ರಿಯೆಯನ್ನು ನಡೆಸಲಾಗಿರುತ್ತದೆ. ಒಟ್ಟಾರೆ ಅಭ್ಯರ್ಥಿಗಳ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಪಿಓ ಅಂತಿಮ ಫಲಿತಾಂಶ ವೀಕ್ಷಿಸಿವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಎಸ್‌ಬಿಐ ಅಂತಿಮ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ
ಸ್ಟೆಪ್ 4: ಅಭ್ಯರ್ಥಿಗಳು ಫಲಿತಾಂಶವನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released final result 2022 for Probationary officer posts. Here is How to check.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+