SBI Interview Admit Card 2021 : ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ನೇಮಕಾತಿಯ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಈಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ನೇಮಕಾತಿ : ಸಂದರ್ಶನ ಪ್ರವೇಶ ಪತ್ರ ರಿಲೀಸ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಒಟ್ಟು 606 ವಿಶೇಷ ಕೇಡರ್ ಅಧಿಕಾರಿ (SCO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಸೆಪ್ಟೆಂಬರ್ 28, 2021 ರಿಂದ ಪ್ರಾರಂಭಾಗಿ ಅಕ್ಟೋಬರ್ 18,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಪದವಿ/ಸ್ನಾತಕೋತ್ತರ ಪದವಿ; MBA/PGDM ಪದವಿ; ಇತಿಹಾಸದಲ್ಲಿ ಅಥವಾ ಸಾಮಾಜಿಕ ವಿಜ್ಞಾನದ ಇತರ ಸ್ಟ್ರೀಮ್‌ಗಳಲ್ಲಿ ಎಂಎ; MBA/PGDBM ಅಥವಾ ಅದಕ್ಕೆ ಸಮನಾದ ಮಾರ್ಕೆಟಿಂಗ್/ಫೈನಾನ್ಸ್‌ನಲ್ಲಿ ವಿಶೇಷತೆ; ವಾಣಿಜ್ಯ, ಹಣಕಾಸು, ಅರ್ಥಶಾಸ್ತ್ರ, ನಿರ್ವಹಣೆ, ಗಣಿತ ಅಥವಾ ಅಂಕಿಅಂಶಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಈ ಹುದ್ದೆಗಳಿಗೆ ಕನಿಷ್ಟ 30 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದರು. ಎಸ್‌ಬಿಐ ಎಸ್‌ಒ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಎಸ್‌ಸಿಒ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2021ರ ನೇಮಕಾತಿಯ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಆನ್‌ಲೈನ್ ಲಿಖಿತ ಪರೀಕ್ಷೆ-ಸಂವಾದ, ಶಾರ್ಟ್‌ಲಿಸ್ಟಿಂಗ್-ಕಮ್-ಇಂಟರಾಕ್ಷನ್/ವೈಯಕ್ತಿಕ/ದೂರವಾಣಿ ಮೂಲಕ/ವೀಡಿಯೊ ಸಂದರ್ಶನ ಮೂಲಕ ಮಾಡಲಾಗುತ್ತದೆ. ಇದೀಗ ಸಂದರ್ಶನ ಪ್ರಕ್ರಿಯೆ ಜನವರಿ 11 ರಿಂದ 13,2022ರ ವರೆಗೆ ನಡೆಯಲಿದ್ದು, ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ನೇಮಕಾತಿ : ಸಂದರ್ಶನ ಪ್ರವೇಶ ಪತ್ರ ರಿಲೀಸ್

ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನ ಕೆಳಭಾಗದಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಸಂದರ್ಶನಕ್ಕೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಸಂದರ್ಶನ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿ ಮತ್ತು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released interview admit card 2021 for specialist cadre officer posts. Candidates who are eligible to attend interview, they can download admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+