ಎಸ್‌ಬಿಐ ನೇಮಕಾತಿ 2019 : ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಸ್‌ಬಿಐ ಬ್ಯಾಂಕ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 10,2019 ರಂದು ಪ್ರಮುಖ ಪರೀಕ್ಷೆಗಳು ನಡೆಯಲಿದ್ದು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ  ಕ್ಲರ್ಕ್ ಹುದ್ದೆಗಳ  ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಸ್‌ಬಿಐ ಒಟ್ಟು 8,904 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಮೇ 3,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು ಇದೀಗ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಎಸ್‌ಬಿಐ ಕ್ಲರ್ಕ್‌ ಹುದ್ದೆಗಳ ಪ್ರಮುಖ ಪರೀಕ್ಷೆ 2019:

ಪ್ರಿಲಿಮಿನರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಎಸ್‌ಬಿಐ ಪ್ರಮುಖ ಪರೀಕ್ಷೆಯು ಕಂಪ್ಯೂಟರ್‌ ಆಧಾರಿತವಾಗಿದ್ದು, ಆಗಸ್ಟ್ 10,2019ರಂದು ಪ್ರಮುಖ ಪರೀಕ್ಷೆಗಳು ನಡೆಯಲಿವೆ.ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ongoing-recruitment.html ಗೆ ಹೋಗಿ
ಸ್ಟೆಪ್ 2: ನಂತರ "Recruitment Of Junior Associates"ನ ಕೆಳಗೆ "Preliminary Exam Results" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಇಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂ / ರೋಲ್ ನಂ ಮತ್ತು ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು.
ಸ್ಟೆಪ್ 5: ನೀವು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದಲ್ಲಿ ಅಂಕಪಟ್ಟಿಯ ಕೆಳಗೆ "Main Exam Call Letter Download" ಲಿಂಕ್‌ ಅನ್ನು ನೀಡಲಾಗಿರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ನಿಮ್ಮ ರೋಲ್ ನಂಬರ್ ಮತ್ತು ಪಾಸ್‌ವರ್ಡ್‌ ನೀಡಿ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 7: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI has released the main examination admit card for clerk posts on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+