ಎಸ್‌ಬಿಐ ಬ್ಯಾಂಕ್ ಪ್ರೊಬೆಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರಮುಖ ಪರೀಕ್ಷೆಗೆ ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್‌ಬಿಐ 2000 ಪ್ರೊಬೆಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 22 ,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಜುಲೈ ೫ ರಿಂದ ಜುಲೈ 2೦ ,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಎಸ್‌ಬಿಐ ಬ್ಯಾಂಕ್ ಪ್ರೊಬೆಷನರಿ ಆಫೀಸರ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಎಸ್‌ಬಿಐ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://www.sbi.co.in/careers/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Recruitment Of PO In SBI" ನ ಕೆಳಗೆ ಕಾಣಿಸುವ "Download Online Main Examination Call Letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ
ಸ್ಟೆಪ್ 5: ನಂತರ ಅಭ್ಯರ್ಥಿಗಳು ಡೌನಲೋಡ್ ಮಾಡಿಕೊಂಡು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ


Click it and Unblock the Notifications











