SBI PO Prelims Admit Card 2021 : ಪ್ರಿಲಿಮಿನರಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಎಸ್‌ಬಿಐ ಪಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಿಲಿಮಿನರಿ ಪ್ರವೇಶ ಪತ್ರ ರಿಲೀಸ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 25,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಪ್ರಿಲಿಮಿನರಿ ಪರೀಕ್ಷೆಯನ್ನು ನವೆಂಬರ್ ನಲ್ಲಿ ನಡೆಸಲು ನಿಗದಿಪಡಿಸಗಿದ್ದು, ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಪಿಓ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಎಸ್‌ಬಿಐ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂ/ರೋಲ್ ನಂ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released preliminary exam 2021 admit card for Probationary officer posts. Here is How to Download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+