SBI PO Interview Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಈಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ನೇಮಕಾತಿ : ಸಂದರ್ಶನ ಪ್ರವೇಶ ಪತ್ರ ರಿಲೀಸ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಡಿಸೆಂಬರ್ 31,2021ರ ಅನ್ವಯ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 12 ವರ್ಷ ಮತ್ತು ಅಂಗವಿಕಲ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,960/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳನ್ನು ಸಹ ಪಡೆಯುತ್ತಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2021ರ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಮಾಡಲಾಗುತ್ತದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ಸಂದರ್ಶನ ಪ್ರಕ್ರಿಯೆಗೆ ಹಾಜರಾಗಬಹುದಾಗಿದ್ದು, ಸಂದರ್ಶನ ಪ್ರಕ್ರಿಯೆಗೆ ಹೋಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಫೆಬ್ರವರಿ 16,2022ರ ಕಾಲಾವಕಾಶವಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನ ಕೆಳಭಾಗದಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಸಂದರ್ಶನಕ್ಕೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಸಂದರ್ಶನ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿ ಮತ್ತು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released interview admit card 2022 for probationary officer posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+