SBI PO Mains Admit Card 2021 : ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಎಸ್‌ಬಿಐ ಪಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮತ್ತು ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 25,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಮೊದಲ ಹಂತದ ಪ್ರಿಲಿಮಿನರಿ ಪರೀಕ್ಷೆಯು ನವೆಂಬರ್ 20,21 ಮತ್ತು 27,2021 ರಂದು ನಡೆಸಲಾಗಿದ್ದು, ಪರೀಕ್ಷಾ ಫಲಿತಾಂಶವನ್ನು ಈಗಾಗಲೇ ಪ್ರಕಟ ಮಾಡಲಾಗಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಮುಖ್ಯ ಪರೀಕ್ಷೆಯನ್ನು ಜನವರಿ 2,2022ರಂದು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಪಿಓ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಎಸ್‌ಬಿಐ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂ/ರೋಲ್ ನಂ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪರೀಕ್ಷಾ ಮಾದರಿ :

ಎಸ್‌ಬಿಐ ಮುಖ್ಯ ಪರೀಕ್ಷೆಯು ಆನ್‌ಲೈನ್ ಮೋಡ್ ನಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯು 200 ಅಂಕಗಳ ಬಹುಆಯ್ಕೆ ಮತ್ತು 50 ಅಂಕಗಳ ವಿವರವುಳ್ಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿ 2021 :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಈ ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 12 ವರ್ಷ ಮತ್ತು ಅಂಗವಿಕಲ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,960/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
SBI released main exam 2021 admit card for Probationary officer posts. Here is How to Download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X