
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಎಸ್‌ಬಿಐ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷೆಯು ಜನವರಿ 29,2021ರಂದು ನಡೆಯಲಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಎಸ್‌ಬಿಐ ಪಿಓ ಪ್ರಮುಖ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಡೆಪ್ 1: ಅಭ್ಯರ್ಥಿಗಳು ಮೊದಲು ಎಸ್‌ಬಿಐ ಅಧಿಕೃತ ವೆಬ್‌ಸೈಟ್ https://www.onlinesbi.com/ ಗೆ ಭೇಟಿ ನೀಡಿ.
ಸ್ಡೆಪ್ 2: ನಂತರ ಎಸ್‌ಬಿಐ ಪಿಓ ಮುಖ್ಯ ಪರೀಕ್ಷೆ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂಬರ್/ರಿಜಿಸ್ಟರ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕವನ್ನು ನಮೂದಿಸಿ
ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರವು ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ಎಸ್‌ಬಿಐ ಪಿಓ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











