
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಮುಖ್ಯ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಎಸ್‌ಬಿಐ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷೆಯು ಜನವರಿ 29,2021ರಂದು ನಡೆದಿತ್ತು. ಪ್ರಮುಖ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಎಸ್‌ಬಿಐ ಪಿಓ ಪ್ರಮುಖ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಡೆಪ್ 1: ಅಭ್ಯರ್ಥಿಗಳು ಮೊದಲು ಎಸ್‌ಬಿಐ ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಡೆಪ್ 2: ನಂತರ ಎಸ್‌ಬಿಐ ಪಿಓ ಮುಖ್ಯ ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂಬರ್ ಅನ್ನು ಚೆಕ್ ಮಾಡಿಕೊಳ್ಳುವ ಮೂಲಕ ನಿಮ್ಮ ಫಲಿತಾಂಶ ವೀಕ್ಷಿಸಿ
ಅಭ್ಯರ್ಥಿಗಳು ಎಸ್‌ಬಿಐ ಪಿಓ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











