ಎಸ್‌ಬಿಐ ಪಿಓ ಪರೀಕ್ಷೆಗೆ ಹಾಜರಾಗಿದ್ದೀರಾ ? ಹಾಗಿದ್ರೆ ಇಂದೇ ಸಂದರ್ಶನ ಪ್ರವೇಶ ಪತ್ರ ಪಡೆಯಿರಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಅಧಿಕಾರಿ ಹುದ್ದೆಗಳಿಗೆ ಸಂದರ್ಶನ ನಡೆಸುತ್ತಿದ್ದು, ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್‌ಬಿಐ ಒಟ್ಟು 2000 ಪ್ರೊಬೇಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 22,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು.

ಎಸ್‌ಬಿಐ ನೇಮಕಾತಿಯ ಸಂದರ್ಶನ ಪ್ರವೇಶ ಪತ್ರ ರಿಲೀಸ್

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದೆ. ಎಸ್‌ಬಿಐ ಪಿಓ ಪ್ರಮುಖ ಪರೀಕ್ಷೆಯು ಜುಲೈ 20,2019 ರಂದು ನಡೆದಿದ್ದು, ಪರೀಕ್ಷಾ ಫಲಿತಾಂಶವು ಪ್ರಕಟಗೊಂಡಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹತೆಯನ್ನು ಪಡೆದಿದ್ದು, ಇದೀಗ ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ.

ಎಸ್‌ಬಿಐ ನೇಮಕಾತಿಯ ಸಂದರ್ಶನ ಪ್ರವೇಶ ಪತ್ರ ರಿಲೀಸ್

ಅಭ್ಯರ್ಥಿಗಳು ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಸೆಪ್ಟೆಂಬರ್ 28ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ಎಸ್‌ಬಿಐ ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Current Openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು "Recruitment of probationary officers in SBI" ಕೆಳಗೆ ಇರುವ "Download Group Exercise & Interview Call Letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ / ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ಸಂದರ್ಶನಕ್ಕೆ ಹೋಗುವಾಗ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಹಾಗೂ ಸಂದರ್ಶನದ ಬಗೆಗೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ ಚೆಕ್ ಮಾಡಿ.

ಅಭ್ಯರ್ಥಿಗಳು ನೇರವಾಗಿ ಸಂದರ್ಶನ ಪ್ರವೇಶ ಪತ್ರ ಪಡೆಯಲು ಇಚ್ಛಿಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI Bank 2019 released interview admit card for probationary officer posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+