Scholarship 2022 : ಅಕ್ಟೋಬರ್ ನಲ್ಲಿ ನೀವು ಅರ್ಜಿ ಸಲ್ಲಿಸಬಹುದಾದ ವಿದ್ಯಾರ್ಥಿವೇತನಗಳಿವು

ವಿದ್ಯಾರ್ಥಿವೇತನಗಳು ಶಿಕ್ಷಣದ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ವಿವಿಧ ವಯಸ್ಸಿನ, ಸಾಂಸ್ಕೃತಿಕ ಹಿನ್ನೆಲೆ ಮತ್ತು ಶೈಕ್ಷಣಿಕ ಅರ್ಹತೆಗಳ ವಿದ್ಯಾರ್ಥಿಗಳಿಗೆ ಸಹಾಯಕವಾಗುವ ಯೋಜನೆಗಳಾಗಿವೆ.
ಉತ್ತಮ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್ ಕಾರ್ಯಕ್ರಮಗಳು ನಿಮ್ಮ ವೃತ್ತಿಜೀವನದ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಅಕ್ಟೋಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಬಹುದಾದ ವಿದ್ಯಾರ್ಥಿವೇತನಗಳ ಮಾಹಿತಿ ಇಲ್ಲಿದೆ

ಕೋವಿಡ್ -19 ಸಾಂಕ್ರಾಮಿಕ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡ ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಗಳು ಬೆಂಬಲವಾಗಿ ನಿಂತಿವೆ. ಅದಲ್ಲದೆ ಸ್ಕಾಲರ್‌ಶಿಪ್‌ಗಳು ವಿದೇಶದಲ್ಲಿ ಅಧ್ಯಯನವನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ.

ಅಕ್ಟೋಬರ್ ವೇಳೆಗೆ ನೀವು ಅರ್ಜಿ ಸಲ್ಲಿಸಬಹುದಾದ ಮೂರು ವಿದ್ಯಾರ್ಥಿವೇತನಗಳ ವಿವರ :

1. ಮರ್ಕ್ ಇಂಡಿಯಾ ಚಾರಿಟೇಬಲ್ ಟ್ರಸ್ಟ್ (MICT) ಸ್ಕಾಲರ್‌ಶಿಪ್ ಕಾರ್ಯಕ್ರಮ 2022-23 :

ಮರ್ಕ್ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ನವಿ ಮುಂಬೈ, ಥಾಣೆ ಮತ್ತು ಬೆಂಗಳೂರಿನಲ್ಲಿ ವಾಸಿಸಿರುವ ಮತ್ತು 10ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಥಿವೇತನವು ಆರ್ಥಿಕವಾಗಿ ದುರ್ಬಲ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ ಮತ್ತು ಉಜ್ವಲ ಹಾಗೂ ಸುರಕ್ಷಿತ ಭವಿಷ್ಯಕ್ಕಾಗಿ ಅಡಿಪಾಯ ಹಾಕುವಲ್ಲಿ ಅವರಿಗೆ ಸಹಾಯ ಮಾಡುತ್ತದೆ.

ಅರ್ಹತೆಗಳು :

* 2022 ರಲ್ಲಿ ಕನಿಷ್ಠ 80% ಅಂಕಗಳೊಂದಿಗೆ 10ನೇ ತರಗತಿಯಲ್ಲಿ (SSC) ಯಶಸ್ವಿಯಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮುಕ್ತವಾಗಿದೆ.
* ವಿದ್ಯಾರ್ಥಿಯು ಪ್ರಸ್ತುತ ಮುಂಬೈ, ನವಿ ಮುಂಬೈ, ಥಾಣೆ ಮತ್ತು ಬೆಂಗಳೂರಿನಲ್ಲಿ ನೆಲೆಸಿರಬೇಕು ಮತ್ತು ಓದುತ್ತಿರಬೇಕು.
* ಅರ್ಜಿದಾರರ ಕುಟುಂಬದ ಆದಾಯವು ತಿಂಗಳಿಗೆ INR 20,000 ಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.

ಬಹುಮಾನಗಳು: ಪದವಿಯವರೆಗೆ ವರ್ಷಕ್ಕೆ INR 35,000 ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-10-2022

ಅಪ್ಲಿಕೇಶನ್ ಮೋಡ್: ಆನ್‌ಲೈನ್ ಅರ್ಜಿಗಳು ಮಾತ್ರ

URL: www.b4s.in/it/MERCK7

2. ಯುವತಿಯರಿಗಾಗಿ ಲೋರಿಯಲ್ ಇಂಡಿಯಾ ಸೈನ್ಸ್ ಸ್ಕಾಲರ್‌ಶಿಪ್‌ 2022 :

L'Oréal India, ಭಾರತದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಜ್ಞಾನ ಕ್ಷೇತ್ರದಲ್ಲಿ ತಮ್ಮ ಪದವಿಯನ್ನು ಮುಂದುವರಿಸಲು ಬಯಸುವ ಯುವತಿಯರಿಗೆ ಶೈಕ್ಷಣಿಕ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ.

ಈ ಸ್ಕಾಲರ್‌ಶಿಪ್‌ನ ಉದ್ದೇಶವು ಯುವತಿಯರು ತಮ್ಮ ಶಿಕ್ಷಣ ಮತ್ತು ವೃತ್ತಿಯನ್ನು ವಿಜ್ಞಾನದಲ್ಲಿ ಮುಂದುವರಿಸಲು ಪ್ರೋತ್ಸಾಹಿಸುವುದು ಮತ್ತು ಆರ್ಥಿಕ ನೆರವಿನೊಂದಿಗೆ ಅವರನ್ನು ಸಬಲೀಕರಣಗೊಳಿಸುವುದು.

ಅರ್ಹತೆಗಳು:

* ಶೈಕ್ಷಣಿಕ ವರ್ಷದಲ್ಲಿ (2021-22) PCB/PCM/PCMB ಯಲ್ಲಿ 85% ಅಂಕಗಳೊಂದಿಗೆ 12ನೇ ತರಗತಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು INR 6 ಲಕ್ಷಕ್ಕಿಂತ ಕಡಿಮೆಯಿರಬೇಕು.

ಬಹುಮಾನಗಳು: ಆಯ್ದ ಮಹಿಳಾ ವಿದ್ಯಾರ್ಥಿಗಳಿಗೆ ವಿಜ್ಞಾನದಲ್ಲಿ ಪದವಿಯನ್ನು ಪಡೆಯಲು INR 2,50,000 ವರೆಗೆ ನಿಗದಿತ ಕಂತುಗಳಲ್ಲಿ ಅವರ ಬೋಧನಾ ಶುಲ್ಕ ಮತ್ತು ಶೈಕ್ಷಣಿಕ ವೆಚ್ಚಗಳಿಗಾಗಿ ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-10-2022

ಅಪ್ಲಿಕೇಶನ್ ಮೋಡ್: ಆನ್‌ಲೈನ್ ಅಪ್ಲಿಕೇಶನ್‌ಗಳು ಮಾತ್ರ

URL: www.b4s.in/it/LIS1

3. ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್‌ನ ಇಸಿಎಸ್ ಸ್ಕಾಲರ್‌ಶಿಪ್ 2022-23 :

ಎಚ್‌ಡಿಎಫ್‌ಸಿ ಬ್ಯಾಂಕ್ 1 ನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಹಂತಕ್ಕೆ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ವಿದ್ಯಾರ್ಥಿವೇತನವು ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ಚಾಚಲಿದೆ.

ಅರ್ಹತೆಗಳು :

* ವಿದ್ಯಾರ್ಥಿವೇತನವು ಭಾರತೀಯ ಪ್ರಜೆಗಳಿಗೆ ಮಾತ್ರ ಮುಕ್ತವಾಗಿದೆ.
* ವಿದ್ಯಾರ್ಥಿಗಳು 1 ಮತ್ತು 12 ನೇ ತರಗತಿ, ಡಿಪ್ಲೊಮಾ, ಪದವಿಪೂರ್ವ ಅಥವಾ ಸ್ನಾತಕೋತ್ತರ (ವೃತ್ತಿಪರ ಮತ್ತು ವೃತ್ತಿಪರವಲ್ಲದ ಕೋರ್ಸ್‌ಗಳನ್ನು ಒಳಗೊಂಡಂತೆ) ಹಂತದ ನಡುವಿನ ಯಾವುದೇ ಮಾನದಂಡಗಳಲ್ಲಿ
ಅಧ್ಯಯನ ಮಾಡುತ್ತಿರಬೇಕು.
* ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಅವರ ಕುಟುಂಬದ ವಾರ್ಷಿಕ ಆದಾಯವು INR 2.5 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
* ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ವೈಯಕ್ತಿಕ ಅಥವಾ ಕೌಟುಂಬಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಅರ್ಜಿದಾರರಿಗೆ ಆದ್ಯತೆ ನೀಡಲಾಗುವುದು. ಏಕೆಂದರೆ ಅನೇಕ ವಿದ್ಯಾರ್ಥಿಗಳು ಶಿಕ್ಷಣದ ವೆಚ್ಚವನ್ನು ಭರಿಸಲು
ಸಾಧ್ಯವಾಗುತ್ತಿಲ್ಲ, ಹಾಗಾಗಿ ಅವರ ಶಿಕ್ಷಣವನ್ನು ಅರ್ಧಕ್ಕೆ ಕೈಬಿಡುವ ಅಪಾಯವಿದೆ.

ಬಹುಮಾನಗಳು: INR 75,000 ವರೆಗೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-10-2022

ಅಪ್ಲಿಕೇಶನ್ ಮೋಡ್: ಆನ್‌ಲೈನ್ ಅಪ್ಲಿಕೇಶನ್‌ಗಳು ಮಾತ್ರ

URL: www.b4s.in/it/HEC12

For Quick Alerts
ALLOW NOTIFICATIONS  
For Daily Alerts

English summary
Here is the list of scholarships which you can apply in October, eligibility criteria, important dates and where to apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X