Schools Reopening in Karnataka: ಕೋವಿಡ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೂ ಶಾಲೆ ತೆರೆಯಲ್ಲ

ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೂ ಶಾಲೆ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಕರ್ನಾಟಕ ಶಿಕ್ಷಣ ಇಲಾಖೆ ತಿಳಿಸಿದೆ.

ಸೆಪ್ಟೆಂಬರ್ ಅಂತ್ಯದವರೆಗೂ ಶಾಲೆಗಳು ತೆರೆಯಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯ ಆಗಸ್ಟ್ 29,2020 ರಂದು ಮಾರ್ಗಸೂಚಿ ಹೊರಡಿಸಿತ್ತು. ಮಾರ್ಗಸೂಚಿಯ ಅನ್ವಯ ಕಂಟೈನ್ಮೆಂಟ್ಜೋನ್ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಸೆಪ್ಟೆಂಬರ್ 21 ರಿಂದ ತೆರೆಯಲು ಹೇಳಿತ್ತು. ವಿದ್ಯಾರ್ಥಿಗಳು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಬಹುದೆಂದು ಅನುಮತಿ ನೀಡಲಾಗಿತ್ತು.

ಸೆಪ್ಟೆಂಬರ್ ಅಂತ್ಯದವರೆಗೂ ಶಾಲೆಗಳು ತೆರೆಯಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಆದರೆ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಕೋವಿಡ್-19 ಹಬ್ಬುತ್ತಿರುವ ಪ್ರಮಾಣ ಕಡಿಮೆಯಾಗದ ಕಾರಣ, ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯ ಪಡಲಾಗಿದೆ. ಆದಕಾರಣ, ಸೆಪ್ಟೆಂಬರ್-2020 ಅಂತ್ಯದವರೆಗೆ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲೆ/ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ಇಲಾಖೆ ತೀರ್ಮಾನಿಸಿದೆ. ಪರಿಸ್ಥಿತಿಯ ಅವಲೋಕನೆಯ ನಂತರ ಮುಂದಿನ ತೀರ್ಮಾನವನ್ನು ತಿಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ.

For Quick Alerts
ALLOW NOTIFICATIONS  
For Daily Alerts

English summary
Schools will not open in Karnataka till September end due to increasing cases of COVID 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X