School Reopening: ಅಧಿಕಾರಿ, ತಜ್ಞರೊಂದಿಗೆ ಚರ್ಚಿಸಿದ ಬಳಿಕವೇ ನಿರ್ಧಾರ ತೆಗೆಕೊಳ್ಳುತ್ತೇನೆ - ಸಿಎಂ ಹೇಳಿಕೆ

ಶಾಲೆಗಳು ಆರಂಭಗೊಳ್ಳುವ ಬಗ್ಗೆ ಯಾವುದೇ ಉಹಾಪೋಹಗಳಿಗೆ ಪೋಷಕರು ಕಿವಿಗೊಡಬಾರದು ಎಂದು ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕಟಣೆ ಹೊರಡಿಸಿದ್ದಾರೆ.

ಶಾಲೆ ಆರಂಭದ ಬಗ್ಗೆ ಅಧಿಕಾರಿ ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಿದ ಬಳಿಕವೇ ನಿರ್ಧಾರ

ಕೋವಿಡ್ -19 ಸೋಂಕು ಹರಡುತ್ತಿರುವ ಸಂದರ್ಭಧಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನಗಳನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೇ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೂ ಸಹಿತ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಶಾಲೆ ಆರಂಭದ ಬಗ್ಗೆ ಅಧಿಕಾರಿ ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಿದ ಬಳಿಕವೇ ನಿರ್ಧಾರ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಭಾದಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ತಿಳಿಸಿದ್ದಾರೆ.

ಶಾಲೆ ಆರಂಭದ ಬಗ್ಗೆ ಅಧಿಕಾರಿ ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಿದ ಬಳಿಕವೇ ನಿರ್ಧಾರ

ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದೆಂದು ಪೋಷಕರಿಗೆ ಮನವಿ ಮಾಡುತ್ತೇನೆ ಮತ್ತು ಈ ಬಗ್ಗೆ ಜಾಗೃತಿ ಮೂಡಿಸಲು ಮಾಧ್ಯಮಗಳಲ್ಲಿ ಕೋರುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
CM yediyurappa says school reopening decisions will be taken after the discussion with officers and experts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X