Schools Reopening In These Sates : ಸೆಪ್ಟೆಂಬರ್ ತಿಂಗಳಿನಿಂದ ಯಾವೆಲ್ಲಾ ರಾಜ್ಯಗಳಲ್ಲಿ ಶಾಲೆ ಆರಂಭವಾಗಲಿವೆ ಗೊತ್ತಾ ?

ಕೊರೋನಾ 3ನೇ ಅಲೆಯ ಆತಂಕದ ನಡುವೆಯೂ ದೇಶದೆಲ್ಲೆಡೆ ಬಹುತೇಕ ರಾಜ್ಯಗಳಲ್ಲಿ ಸೆಪ್ಟೆಂಬರ್ ತಿಂಗಳಿನಿಂದ ಹಲವು ಕ್ರಮಗಳನ್ನು ತೆಗೆದುಕೊಂಡು ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಇತರ ಸಿಬ್ಬಂದಿಗಳ ಆರೋಗ್ಯ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಮತ್ತು ಪೋಷಕರ ಅನುಮತಿಯ ಮೇರೆಗೆ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಗುತ್ತಿದೆ.

 
2021ರ ಸೆಪ್ಟೆಂಬರ್ ತಿಂಗಳಿನಿಂದ ಈ ರಾಜ್ಯಗಳಲ್ಲಿ ಶಾಲೆ ಆರಂಭ

ಕೆಲವು ರಾಜ್ಯಗಳಲ್ಲಿ ನಾಳೆಯಿಂದ ಆಫ್‌ಲೈನ್ ತರಗತಿಗಳು ಆರಂಭವಾಗಲಿವೆ ಆದರೂ ಶಾಲೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗೆ ಅನುಮತಿಯನ್ನು ನೀಡಲಾಗಿದೆ. ಹಾಗಾದ್ರೆ ನಾಳೆಯಿಂದ ಯಾವೆಲ್ಲಾ ರಾಜ್ಯಗಳಲ್ಲಿ ಶಾಲೆ ಪುನರಾರಂಭವಾಗಲಿವೆ ಎಂಬ ಮಾಹಿತಿ ಇಲ್ಲಿದೆ.

ತಮಿಳುನಾಡು:

ತಮಿಳುನಾಡು:

ತಮಿಳುನಾಡಿನಲ್ಲಿ 9 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನಾಳೆಯಿಂದ ಶಾಲೆ ಪುನರಾರಂಭವಾಗಲಿದೆ. ಶಾಲೆಗಳಲ್ಲಿ ಶೇ 50ರಷ್ಟು ಹಾಜರಾತಿಗೆ ಅನುಮತಿ ನೀಡಲಾಗಿದೆ. ಈ ಕುರಿತು ಸರ್ಕಾರವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ ಶಾಲೆಗಳು ವಾರದಲ್ಲಿ ಆರು ದಿನಗಳು ಕಾರ್ಯನಿರ್ವಹಿಸುತ್ತವೆ ಮತ್ತು ತರಗತಿಗಳಲ್ಲಿ 20 ವಿದ್ಯಾರ್ಥಿಗಳ ಬ್ಯಾಚ್‌ಗಳಾಗಿ ವಿಂಗಡಿಸಲಾಗುತ್ತದೆ. ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶ ನೀಡಲಾಗಿದೆ. ಒಂದು ವೇಳೆ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿಗಳು ಲಭ್ಯವಿಲ್ಲದಿದ್ದರೆ ಪರ್ಯಾಯ ದಿನಗಳಲ್ಲಿ ವಿದ್ಯಾರ್ಥಿಗಳು ಸರದಿ ಆಧಾರದಲ್ಲಿ ಶಾಲೆಗೆ ಬರುವಂತೆ ಹೇಳಲಾಗುತ್ತದೆ ಎಂದು ಎಸ್‌ಒಪಿಯಲ್ಲಿ ತಿಳಿಸಿದೆ. ಆನ್‌ಲೈನ್ ಮತ್ತು ಆಫ್‌ಲೈನ್ ಶಿಕ್ಷಣವು ಮುಂದುವರಿಯಲಿದೆ ಎಂದು ಸರ್ಕಾರ ಹೇಳಿದೆ.

ದೆಹಲಿ:

ದೆಹಲಿ:

ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಪುನರಾರಂಭಿಸಲು ಅವಕಾಶ ನೀಡಲಾಗಿದೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಥರ್ಮಲ್ ಸ್ಕ್ರೀನಿಂಗ್, ಊಟದ ವಿರಾಮಗಳು, ತರಗತಿಗಳಲ್ಲಿ ಪರ್ಯಾಯ ಆಸನದ ವ್ಯವಸ್ಥೆಯ ಕ್ರಮಗಳನ್ನು ತೆಗೆದುಕೊಂಡು ಶಾಲೆ ಆರಂಭಿಸಲು ಸಲಹೆ ನೀಡಿದೆ. ಕೋವಿಡ್ ಕಂಟೈನ್‌ಮೆಂಟ್ ವಲಯಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳು ಶಾಲೆ ಮತ್ತು ಕಾಲೇಜುಗಳಿಗೆ ಬರಲು ಅನುಮತಿ ಇಲ್ಲ ಎಂದು ಸರ್ಕಾರ ಹೇಳಿದೆ. ಆನ್‌ಲೈನ್ ಮತ್ತು ಆಫ್‌ಲೈನ್ ತರಗತಿಗಳು ಮುಂದುವರಿಯಲಿದೆ ಎಂದು ಸರ್ಕಾರ ಹೇಳಿದೆ.

ರಾಜಸ್ಥಾನ :
 

ರಾಜಸ್ಥಾನ :

ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳು, ಕಾಲೇಜುಗಳು ಮತ್ತು ತರಬೇತಿ ಸಂಸ್ಥೆಗಳು ಜೊತೆಗೆ 9 ರಿಂದ 12 ನೇ ತರಗತಿಯವರೆಗೆ ಶಾಲೆಗಳನ್ನು ಸೆಪ್ಟೆಂಬರ್ 1 ರಿಂದ ತೆರೆಯಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ. ತರಗತಿಗಳನ್ನು ಶೇ.50ರಷ್ಟು ಹಾಜರಾತಿಯೊಂದಿಗೆ ನಡೆಸಲಾಗುವುದು. 

9 ರಿಂದ 12 ನೇ ತರಗತಿಗಳಿಗೆ ನಾಳೆ ಶಾಲೆಗಳು ಪುನರಾರಂಭವಾಗುತ್ತಿದ್ದರೂ, ಕೆಳವರ್ಗದವರಿಗೆ ತರಗತಿಗಳನ್ನು ಪುನರಾರಂಭಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ರಾಜಸ್ಥಾನದ ಶಾಲಾ ಶಿಕ್ಷಣ ಇಲಾಖೆ ಈ ಹಿಂದೆ ಹೇಳಿತ್ತು.

ಉತ್ತರ ಪ್ರದೇಶ:

ಉತ್ತರ ಪ್ರದೇಶ:

9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಶಾಲೆ ಆರಂಭಿಸಿದ ಬಳಿಕ ಉತ್ತರ ಪ್ರದೇಶ ಸರ್ಕಾರವು 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಶಾಲೆ ತೆರೆಯಲು ಅನುಮತಿ ನೀಡಿದೆ. ಸೆಪ್ಟೆಂಬರ್ 23 ರಿಂದ 6 ರಿಂದ 8ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮತ್ತು ಸೆಪ್ಟೆಂಬರ್ 1 ರಿಂದ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ತೆರೆಯಲು ಆದೇಶ ಹೊರಡಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರದೇಶ:

ಮಧ್ಯಪ್ರದೇಶ:

ಮಧ್ಯಪ್ರದೇಶ ಸರ್ಕಾರವು ನಾಳೆ 6 ರಿಂದ 12 ನೇ ತರಗತಿಯವರೆಗೆ ಶಾಲೆಗಳನ್ನು ತೆರೆಯಲು ನಿರ್ಧರಿಸಿದೆ. ಈ ಮೊದಲು ಸರ್ಕಾರವು 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ಭೇಟಿ ನೀಡಲು ಅನುಮತಿ ನೀಡಿತ್ತು.

ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಪ್ಪಿಗೆಯನ್ನು ತರುವುದು ಕಡ್ಡಾಯವಾಗಿರುತ್ತದೆ. ಶಾಲಾ ಆಡಳಿತ ಮತ್ತು ಪೋಷಕರು COVID-19 ಪ್ರೋಟೋಕಾಲ್‌ಗಳ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಬೇಕು.

ಕರ್ನಾಟಕ:

ಕರ್ನಾಟಕ:

ರಾಜ್ಯದಲ್ಲಿ ಈಗಾಗಲೇ 9 ರಿಂದ 11ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಆರಂಭಗೊಂಡಿದೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಡೆದ ಸಭೆ ಬಳಿಕ ಸೆಪ್ಟೆಂಬರ್ 6ನೇ ತಾರೀಖಿನಿಂದ 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದೆ. ಶೇ.50ರಷ್ಟು ಹಾಜರಾತಿಯೊಂದಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ಮತ್ತು ವಾರದಲ್ಲಿ ಐದು ದಿನಗಳು ಮಾತ್ರ ತರಗತಿ ನಡೆಸಲು ಅವಕಾಶ ನೀಡಲಾಗುವುದು ಎಂದು ಹೇಳಿದೆ. ಶೇ.2ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವ್ ದರವು ಇರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆ ತೆರೆಯಲು ಸರ್ಕಾರ ಅವಕಾಶ ಒದಗಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Here is the list of states where schools reopening from september 2021.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X