Schools Reopening in Karnataka: ಶಾಲೆಗಳ ಆರಂಭ ಕುರಿತು ಸಲಹೆ ಕೋರಿದ ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ವಳವಾಗುತ್ತಿರುವ ಸಂದರ್ಭದಲ್ಲಿ ಶಾಲೆಗಳ ಆರಂಭ ಕುರಿತು ಸಲಹೆ ನೀಡುವಂತೆ ಎಲ್ಲ ಸಚಿವರು ಮತ್ತು ಶಾಸಕರಿಗೆ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

 

ಶಾಲೆಗಳ ಆರಂಭ ಕುರಿತು ಸಲಹೆ ಕೋರಿದ ಸಚಿವ ಸುರೇಶ್ ಕುಮಾರ್

ಶಾಲೆಗಳನ್ನು ಯಾವಾಗ ಆರಂಭಿಸಬೇಕು. ಯಾವ ತರಗಿತಗಳನ್ನು ಮೊದಲು ಪ್ರಾರಂಭಿಸಬಹುದು. ಇದಕ್ಕೆ ಸಮುದಾಯ ಮತ್ತು ಜನಪ್ರತಿನಿಧಿಗಳಿಂದ ಯಾವ ರೀತಿ ಸಹಕಾರ ನಿರೀಕ್ಷಿಸಬಹುದು ಎಂದು ಸಲಹೆ ಮತ್ತು ಸೂಚನೆ ನೀಡುವಂತೆ ಪತ್ರದಲ್ಲಿ ಅವರು ಕೋರಿದ್ದಾರೆ.

ಕೊರೋನಾ ಕಾರಣದಿಂದಾಗಿ ಮಾರ್ಚ್ ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲು ಸಾಧ್ಯವಾಗಿಲ್ಲ. ಜೂನ್ ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಇನ್ನೂ ಆರಂಭಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಲಹೆ ನೀಡುವಂತೆ ಅವರು ಕೇಳಿದ್ದಾರೆ.

ಈ ಪರಿಸ್ಥಿತಿಯ ನಡುವೆಯೇ ಸಾಮಾಜಿಕ ಜೀವನ ತಹಬಂದಿಗೆ ಮರಳಬೇಕಿದೆ. ಕೊರೋನಾ ಕಾರಣಕ್ಕಾಗಿ ಅತ್ಯಂತ ಸಂಕಷ್ಟಕ್ಕೆ ಸಿಲುಕಿರುವುದು ಶಿಕ್ಷಣ ಕ್ಷೇತ್ರವಾಗಿದೆ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka Minister s suresh kumar asked advice to ministers and legislators on schools reopening.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X