ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರು ಆಗಸ್ಟ್ 15ರ ಬಳಿಕ ಶಾಲೆ ಪ್ರಾರಂಭ ದಿನಾಂಕ ಘೋಷಿಸಲಾಗುವುದು ಎಂದು ಹೇಳಿರುವುದರಿಂದ ರಾಜ್ಯದಲ್ಲಿ ಜುಲೈ 1ರಿಂದ ಶಾಲೆ ಪ್ರಾರಂಭವಾಗುವುದಿಲ್ಲ ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದ ನಿರ್ದೇಶನದಂತೆ ಶಿಕ್ಷಣ ಇಲಾಖೆಯು ಪೋಷಕರ ಅಭಿಪ್ರಾಯವನ್ನು ಸಂಗ್ರಹಿಸಲು ಜೂನ್ 10 ರಿಂದ 12 ರವರೆಗೆ ಪೋಷಕರು, ಎಸ್‌ಡಿಎಂಸಿ, ಎಸ್‌ಎಂಸಿ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ. ಈ ಸಭೆಗಳ ದಿನಾಂಕವನ್ನು ಜೂನ್ 20 ರವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಸಭೆ ನಂತರ ಬಂದಂತಹ ಅಭಿಪ್ರಾಯದ ಮೇರೆಗೆ ಶಾಲೆ ಪ್ರಾರಂಭ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಅವರು ಹೇಳಿದ್ದಾರೆ.
For Daily Alerts