SEBI Phase II Online Exam Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) 2022ರ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳ ಫೇಸ್ II ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸೆಬಿ ಗ್ರೇಡ್ ಎ ಹುದ್ದೆಗಳ ಫೇಸ್  II ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ 120 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಜನವರಿ 5,2022 ರಿಂದ ಜನವರಿ 24,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಡಿಸೆಂಬರ್ 31,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರಾಗಿದ್ದರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 28,150/- ರಿಂದ 1,15,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಆನ್‌ಲೈನ್‌ ಫೇಸ್ I ಪರೀಕ್ಷೆಯ ಫಲಿತಾಂಶವನ್ನು ಈಗಾಗಲೆ ಪ್ರಕಟ ಮಾಡಲಾಗಿದ್ದು, ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಫೇಸ್ II ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷೆಯನ್ನು ಏಪ್ರಿಲ್ 3,2022ರಂದು ನಿಗದಿಪಡಿಸಲಾಗಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್‌ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಸೆಬಿ ಆನ್‌ಲೈನ್ ಫೇಸ್ II ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಸೆಬಿ ಅಧಿಕೃತ ವೆಬ್‌ಸೈಟ್‌ https://www.sebi.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಸೆಬಿ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SEBI released online exam Phase II admit card 2022 for grade A (assistant manager) posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+