ದ್ವಿತೀಯ ಪಿಯುಸಿ: ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಪತ್ರಿಕೆ

Posted By:

ದ್ವಿತೀಯ ಪಿಯು ಪ್ರಶ್ನೆಪತ್ರಿಕೆಗಳನ್ನು ಕನ್ನಡ ಹಾಗೂ ಇಂಗ್ಲಿಷ್ ಎರಡು ಭಾಷೆಗಳಲ್ಲೂ ಮುದ್ರಿಸಲು ರಾಜ್ಯ ಸರ್ಕಾರದಿಂದ ಸೂಚನೆ ಸಿಕ್ಕಿದೆ.

ಈ ಹಿಂದಿನ ಪದ್ಧತಿಯಂತೆಯೇ ಪ್ರಶ್ನೆಪತ್ರಿಕೆಗಳನ್ನು ಎರಡು ಮಾಧ್ಯಮದಲ್ಲಿ ಮುದ್ರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸೂಚನೆ ನೀಡಿದ್ದಾರೆ.

ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ

ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಪತ್ರಿಕೆ

ಕೆಲ ದಿನಗಳ ಹಿಂದಷ್ಟೇ ಪಿಯುಸಿ ಪ್ರಶ್ನೆ ಪತ್ರಿಕೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲಿ ಪ್ರಶ್ನೆಗಳನ್ನು ಮುದ್ರಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿತ್ತು.

2018ರ ಮಾರ್ಚ್‌ನಲ್ಲಿ ನಡೆಯುವ ದ್ವಿತೀಯ ಪಿಯು ಪರೀಕ್ಷೆಗಾಗಿ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವಾಗ ಯಾವ ಭಾಷೆಯಲ್ಲಿ (ಕನ್ನಡ ಅಥವಾ ಇಂಗ್ಲಿಷ್) ಪರೀಕ್ಷೆ ಬರೆಯುವುದಾಗಿ ನಮೂದಿಸುತ್ತಾರೊ ಆ ಭಾಷೆಯ ಪ್ರಶ್ನೆಪತ್ರಿಕೆ ಮಾತ್ರ ನೀಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಹಿಂದೆ ಆದೇಶ ಹೊರಡಿಸಿತ್ತು.

ವಿದ್ಯಾರ್ಥಿಗಳು ಮತ್ತು ಭಾಷಾ ಹಿತದೃಷ್ಟಿಯಿಂದ ಎರಡು ಭಾಷೆಗಳಲ್ಲೂ ಪ್ರಶ್ನೆಪತ್ರಿಕೆ ಇರುವುದು ಅಗತ್ಯ ಎಂದು ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಸಂಘದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರು ಸಚಿವರನ್ನು ಕೋರಿದ್ದರು.

ಭಾಷಾ ವಿಷಯಗಳನ್ನು ಹೊರತುಪಡಿಸಿ ಕೋರ್ ವಿಷಯಗಳ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ತೆಗೆದುಕೊಂಡ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯಲ್ಲೂ ಪ್ರಶ್ನೆ ಪತ್ರಿಕೆಗಳು ಇರುವುದು ಅಗತ್ಯ. ಕೇವಲ ಒಂದೇ ಭಾಷೆಯಲ್ಲಿ ನೀಡಿದರೆ ಪ್ರಶ್ನೆಗಳು ಅರ್ಥವಾಗದೆ ವಿದ್ಯಾರ್ಥಿ ಅದಕ್ಕೆ ಉತ್ತರಿಸುವುದನ್ನೇ ಬಿಡಬೇಕಾಗುತ್ತದೆ. ಅಲ್ಲದೆ, ಇದರಿಂದ ಕನ್ನಡ ಭಾಷೆಗೂ ಧಕ್ಕೆಯುಂಟಾಗುತ್ತದೆ ಎಂಬ ಬಗ್ಗೆ ಸಚಿವರಿಗೆ ಮನವರಿಕೆ ಮಾಡಲಾಗಿತ್ತು.

ನೂತನ ಆದೇಶದಂತೆ ಕನ್ನಡ ಅಥವಾ ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಆಯ್ಕೆ ಮಾಡಿಕೊಂಡು ಅದೇ ಮಾಧ್ಯಮದಲ್ಲಿ ಉತ್ತರಿಸಬಹುದಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾದಂತಾಗಿದೆ.

English summary
The State Government has been instructed to print secondary PU question papers in both Kannada and English language.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia