ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

Posted By:

ಪದವಿಪೂರ್ವ ಶಿಕ್ಷಣ ಇಲಾಖೆ ಇಂದು 2017 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಗೊಂಡಿದ್ದು, ಬುಧವಾರ ಎಲ್ಲಾ ಕಾಲೇಜುಗಳಲ್ಲೂ ಫಲಿತಾಂಶ ಲಭ್ಯವಿರಲಿದೆ.

ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಲಾಖೆಯ ವೆಬ್ಸೈಟ್  pue.kar.nic.in ಮತ್ತು karresults.nic.in ನಲ್ಲಿ ನೋಡಬಹುದು.

ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 6,79,061 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 3,23,364 ವಿದ್ಯಾರ್ಥಿಗಳು ಅನುತ್ತೀರ್ಣ ಆಗಿದ್ದರು.

ಅನುತ್ತೀರ್ಣರಾದ 2,51,636 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಬರೆದಿದ್ದು, 66320 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಫಲಿತಾಂಶ ಪಡೆಯುಲು ಇಲ್ಲಿ ಕ್ಲಿಕ್ ಮಾಡಿ

ಫಲಿತಾಂಶ ಪಡೆಯುವ ವಿಧಾನ

  • ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ
  • ನಿಮ್ಮ ರಿಜಿಸ್ಟರ್ ನಂಬರ್ ನಮೂದಿಸಿ
  • ಫಲಿತಾಂಶವನ್ನು ಪ್ರಿಂಟ್ ತೆಗೆದುಕೊಳ್ಳಿ

English summary
Department of Pre University has declared second PU supplementary results today on its official website.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia