ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜುಲೈ 14 ರಂದು ಅಂದರೆ ನಾಳೆ ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಾರಿ ಒಟ್ಟು 5.95 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ. ಏಪ್ರಿಲ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಬಾಕಿ ಉಳಿದಿದ್ದ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಯಿತು. ಇದೀಗ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ ಎಂಬ ಮಾಹಿತಿ ಹೊರಬಿದ್ದಿದೆ.
ನಾಳೆ ಅಧಿಕೃತ ಫಲಿತಾಂಶ ಪ್ರಕಟಣೆಯ ಬಳಿಕ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ರವಾನೆಯಾಗುವುದು. ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
For Quick Alerts
For Daily Alerts
English summary
Second puc results 2020 will announce by tomorrow said by minister suresh kumar
Story first published: Monday, July 13, 2020, 15:53 [IST]


Click it and Unblock the Notifications











