Seond PUC English Exam: ವಿದ್ಯಾರ್ಥಿಗಳಿಗೆ ಆನ್‌ಲೈನ್ ಪುನರ್‌ಮನನ ತರಗತಿ

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಜೂನ್ 18,2020ರಂದು ನಡೆಯಲಿದೆ. ಸುಮಾರು 3 ತಿಂಗಳ ನಂತರ ಬಾಕಿ ಉಳಿದ ಇಂಗ್ಲೀಷ್ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಆನ್‌ಲೈನ್‌ನಲ್ಲಿ ಪುನರ್ ಮನನ ತರಗತಿಗಳನ್ನು ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಪಿಯುಸಿ ಇಂಗ್ಲೀಷ್ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಇಂಗ್ಲೀಷ್ ಉಪನ್ಯಾಸಕರು ಇದರ ಬಗ್ಗೆ ವಿಶೇಷ ಗಮನ ಹರಿಸಬೇಕು. ಶಿವಮೊಗ್ಗ ಪಿಯು ಇಂಗ್ಲೀಷ್ ಉಪನ್ಯಾಸಕರ ವೇದಿಕೆ ಸಿದ್ಧಪಡಿಸಿದ ವೀಡಿಯೋ ಯೂಟ್ಯೂಬ್ ಪಾಠವನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.pue.kar.nic.in/home.asp ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ II PUC ENGLISH SUBJECT REVISION VIDEOS ಮೇಲೆ ಕ್ಲಿಕ್ ಮಾಡಿ. ಅಲ್ಲಿ ಲಭ್ಯವಿರುವ ವೀಡಿಯೋಗಳನ್ನು ನೋಡಿಕೊಂಡು ಪುನರ್ ಮನನ ಮಾಡಿಕೊಳ್ಳಬಹುದು.

ಗಮನಿಸಿ:

ಕೊರೊನಾ ಸಮಸ್ಯೆಯಿಂದಾಗಿ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳು ತಮ್ಮ ಊರುಗಳಿಗೆ ತೆರಳಿದ್ದಾರೆ ಅಲ್ಲದೆ ಅಲ್ಲಿಂದಲೇ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆಯಲು ಬಯಸಿದ್ದು, ಅಂತಹ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Second puc english exam will be held on june 18, Online classes are going for them.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X