ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕೀ ಉತ್ತರಗಳನ್ನು (ಇಂಗ್ಲಿಷ್ ಹೊರತುಪಡಿಸಿ) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗಿದೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು. ಈ ಉತ್ತರಗಳಲ್ಲಿ ಏನಾದರೂ ಲೋಪದೋಷ ಕಂಡುಬಂದಲ್ಲಿ ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆಯಾಗಿದ್ದರಿಂದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯನ್ನು ನಡೆಸುವುದು ಸಾಧ್ಯವಾಗಿಲ್ಲ ಹಾಗಾಗಿ ಇಂಗ್ಲೀಷ್ ಹೊರತುಪಡಿಸಿ ಉಳಿದ ಪತ್ರಿಕೆ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಲಾಕ್‌ಡೌನ್ ಮುಗಿದ ಬಳಿಕ ಇಂಗ್ಲೀಷ್ ಪರೀಕ್ಷೆಯನ್ನು ನಡೆಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದ್ದು, ಪರೀಕ್ಷೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಳುತ್ತಿರತಕ್ಕದ್ದು.
For Daily Alerts