ದ್ವಿತೀಯ ಪಿಯುಸಿ ಪರೀಕ್ಷೆ: ವಲಸೆ ಕಾರ್ಮಿಕ ಮಕ್ಕಳಿಗೆ ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ

ಕೊರೋನಾ ಸೋಂಕಿನ ಭೀತಿಯಿಂದಾಗಿ ಲಾಕ್‌ಡೌನ್‌ ವಿಧಿಸಿದ್ದ ಕಾರಣ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇತ್ತೀಚೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಮಾಡಲಾಗಿದ್ದು, ಜೂನ್ 18ರಂದು ಬಾಕಿ ಉಳಿದ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ

ಈ ಪರೀಕ್ಷೆಗೆ ವಿದ್ಯಾರ್ಥಿನಿಲಯವಾಸಿಯಾಗಿದ್ದ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಕೊರೋನಾ ಹಿನ್ನೆಲೆಯಲ್ಲಿ ತಮಗೆ ಸಮೀಪವಿರುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ವಿದ್ಯಾರ್ಥಿನಿಲಯ ವಾಸಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳು ಲಾಕ್-ಡೌನ್‌ನಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ತೆರಳಿರುವ ಹಿನ್ನೆಲೆಯಲ್ಲಿ ಅವರಿರುವ ಸ್ಥಳದ ಸಮೀಪದ ಜಿಲ್ಲೆಯ ಅಥವಾ ತಾಲೂಕಿನಲ್ಲಿ ಅವರು ಬಯಸುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

16229 ವಿದ್ಯಾರ್ಥಿಗಳು ಪ್ರಸ್ತುತ ತಾವಿರುವ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಇಚ್ಛೆ ವ್ಯಕ್ತಪಡಿಸಿದ್ದು, ಅದರಂತೆ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗುವ ಪ್ರಕ್ರಿಯೆ ನಡೆಯುತ್ತಿದೆ ಮತ್ತು ಅಂತಹ ವಿದ್ಯಾರ್ಥಿಗಳಿಗೆ ನಿಗದಿಪಡಿಸಲಾದ ಪರೀಕ್ಷಾ ಕೇಂದ್ರಗಳ ವಿವರಗಳನ್ನು ಶೀಘ್ರದಲ್ಲೇ ಪಿಯು ಮಂಡಳಿ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಹಾಗೆಯೇ ರಾಜ್ಯದಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದ ಹೊರ ರಾಜ್ಯದ ವಿದ್ಯಾರ್ಥಿಗಳು ತಮ್ಮ ಊರಿಗೆ ತೆರಳಿದ್ದು, ಅವರ ಇಚ್ಛೆಯಂತೆ ಆ ರಾಜ್ಯದ ಗಡಿ ಭಾಗದ ನಮ್ಮ ರಾಜ್ಯದ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಬಹುದಾಗಿದೆ.

ವಿಶೇಷವಾಗಿ ಕಾಸರಗೋಡಿನ ಗಡಿ ಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಗಡಿಭಾಗದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷೆ ಸಮಯದ ನಂತರ ಗಡಿ ಭಾಗದವರೆಗೆ ಬಸ್ ವ್ಯವಸ್ಥೆ ಮಾಡಲು ದಕ್ಷಿಣ ಕನ್ನಡ ಜಿಲ್ಲಾ ಪಿಯು ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
.
ಈ ಕುರಿತಂತೆ ಹೆಚ್ಚಿನ ವಿವರಗಳಿಗೆ ಪಿಯು ಮಂಡಳಿಯ ಸಹಾಯವಾಣಿ ಸಂಖ್ಯೆ- 080-23083900 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
There is special arrangements for students who are entering to second puc english exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X