Self Defence Classes For Girls : ವಿದ್ಯಾರ್ಥಿನಿಯರಿಗಾಗಿ ಸ್ವಯಂರಕ್ಷಣೆ ತರಬೇತಿ ಕಾರ್ಯಕ್ರಮ ಪ್ರಾರಂಭ

ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವ ಮತ್ತು ದುಷ್ಕರ್ಮಿಗಳ ದಾಳಿಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಲಿ ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರವು ಸ್ವಯಂರಕ್ಷಣೆ ತಂತ್ರಗಳ ಬಗ್ಗೆ ವಿಶೇಷ ತರಬೇತಿ ನೀಡಲು ನಿರ್ಧರಿಸಿದೆ. ತಿಂಗಳ ಮೊದಲ ವಾರದಿಂದಲೇ ಈ ತರಗತಿಗಲು ಆರಂಭವಾಗಲಿವೆ.

ಕರ್ನಾಟಕ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂರಕ್ಷಣೆ ವಿಶೇಷ ತರಬೇತಿ

ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯದ ಸರ್ಕಾರಿ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ನಾಲ್ಕು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ವಿಶೇಷ ತರಬೇತಿಯನ್ನು ಪಡೆಯಲಿದ್ದಾರೆ. ಈ ತರಬೇತಿಯಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ, ಟೇಕ್ವಾಂಡೋ ಮತ್ತು ಜೂಡೋ ಕಲಿಸಲಾಗುವುದು.

ಹತ್ತನೇ ತರಗತಿಯನ್ನು ಪೂರ್ಣಗೊಳಿಸಿದ ಮತ್ತು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಹಾಸ್ಟೆಲ್‌ಗಳಲ್ಲಿ ವಾಸಿಸುವ ವಿದ್ಯಾರ್ಥಿನಿಯರು ಕೂಡ ಈ ತರಬೇತಿಗೆ ಒಳಪಡುತ್ತಾರೆ.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಈ ವಿಶೇಷ ತರಬೇತಿಗಾಗಿ ಎರಡು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ವಿಶೇಷ ತರಗತಿಗಳಿಗೆ ಹಾಜರಾಗುವ ತರಬೇತುದಾರರಿಗೆ ಪ್ರತಿ ತರಗತಿಗೆ 200 ರೂಪಾಯಿ ಗೌರವಧನ ನೀಡಲಾಗುವುದು. 4245 ಸರ್ಕಾರಿ ಪ್ರೌಢಶಾಲೆಗಳು ಮತ್ತು 441 ಪದವಿಪೂರ್ವ ಕಾಲೇಜುಗಳ ಬಾಲಕಿಯರು ಇದರ ಪ್ರಯೋಜನ ಪಡೆಯಲಿದ್ದಾರೆ.

ದಾಳಿಕೋರರಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವುದು ತರಬೇತಿಯ ಉದ್ದೇಶವಾಗಿದೆ. ಆಯ್ಕೆಯಾದ ತರಬೇತುದಾರರಿಗೆ ಎಂಟು ತಿಂಗಳ ಅವಧಿಗೆ ರೂ 4000/-ರೂ, ಪ್ರತಿ ಹಾಸ್ಟೆಲ್‌ಗೆ ಪ್ರಯಾಣ ವೆಚ್ಚವಾಗಿ ರೂ 800/-ರೂ ನೀಡಲಾಗುವುದು. ಪ್ರತಿ ವಿದ್ಯಾರ್ಥಿಯು ವರ್ಷಕ್ಕೊಮ್ಮೆ ಏಕರೂಪದ ವೆಚ್ಚವಾಗಿ 500/-ರೂ ರೂಪಾಯಿಗಳನ್ನು ಪಡೆಯುತ್ತಾರೆ.

ತರಬೇತಿಯನ್ನು ನೀಡಲು ತರಬೇತುದಾರರು ಪ್ರತಿ ಹಾಸ್ಟೆಲ್‌ಗೆ ವಾರಕ್ಕೆ ಎರಡು ಬಾರಿ ಮತ್ತು ತಿಂಗಳಿಗೆ ಎಂಟು ಬಾರಿ ಭೇಟಿ ನೀಡಬೇಕು. ಶಾಲಾ ಕಾಲೇಜುಗಳಲ್ಲಿ ಪ್ರತಿ ವಾರ 45 ನಿಮಿಷ ಅವಧಿಯ ಎರಡು ತರಗತಿಗಳನ್ನು ಆಯೋಜಿಸಬೇಎಕು ಹಾಗೂ ಮೂರು ತಿಂಗಳಲ್ಲಿ ಒಟ್ಟು 20 ತರಬೇತಿ ಕ್ಲಾಸುಗಳು ಪೂರ್ಣಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ. ಈ ತರಬೇತಿಯಲ್ಲಿ ವಿದ್ಯಾರ್ಥಿನಿಯರಿಗೆ ವಿವಿಧ ತಂತ್ರಗಳ ಕಲಿಕೆಯನ್ನು ನೀಡಲಾಗುತ್ತದೆ. ಕೋರ್ಸ್ ಪ್ರಾರಂಭವಾಗುವ ಮೊದಲು ಪ್ರತಿ ವಿದ್ಯಾರ್ಥಿನಿಯ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.

ತರಬೇತಿ ಕಾರ್ಯಕ್ರಮವು ಮೊದಲ ವರ್ಷದಲ್ಲಿ ಜನವರಿ 1,2022 ರಿಂದ ಮಾರ್ಚ್ 31, 2022 ರವರೆಗೆ ಮೂರು ತಿಂಗಳ ಅವಧಿಗೆ ಮಾತ್ರ ನಡೆಯುತ್ತದೆ ಮತ್ತು ಮುಂದಿನ ಶೈಕ್ಷಣಿಕ ವರ್ಷದಿಂದ ಇದು ನಿಯಮಿತ ಕಾರ್ಯಕ್ರಮವಾಗಿರುತ್ತದೆ. ಕರ್ನಾಟಕದಲ್ಲಿ ಈ ವಿಶೇಷ ತರಬೇತಿ ಕಾರ್ಯಕ್ರಮಕ್ಕೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರಿಗೆ ಸೇರಿದ 629 ಹಾಸ್ಟೆಲ್‌ಗಳಲ್ಲಿ ಸುಮಾರು 69,867 ವಿದ್ಯಾರ್ಥಿಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯ 69,867 ಸಂಖ್ಯೆಯ ವಿದ್ಯಾರ್ಥಿಗಳು ಅರ್ಹರಾಗಿದ್ದಾರೆ.

ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರೇಷ್ಮಾ ಕೌಸರ್ ಮಾತನಾಡಿ, "ಈ ಕಾರ್ಯಕ್ರಮವು ಹೆಣ್ಣುಮಕ್ಕಳಿಗೆ ಯಾವುದೇ ಕಷ್ಟದ ಪರಿಸ್ಥಿತಿಯನ್ನು ಎದುರಿಸುವ ಆತ್ಮವಿಶ್ವಾಸವನ್ನು ತರುತ್ತದೆ. ನಾವು ಈಗಾಗಲೇ ಮಾರ್ಷಲ್ ಆರ್ಟ್ಸ್‌ನಲ್ಲಿ ತರಬೇತುದಾರರನ್ನು ಆಯ್ಕೆ ಮಾಡಿದ್ದೇವೆ. ಈ ಕಾರ್ಯಕ್ರಮವು ಗ್ರಾಮೀಣ ಹೆಣ್ಣುಮಕ್ಕಳಲ್ಲಿ ಕಾಣೆಯಾಗಿರುವ ನಾಯಕತ್ವದ ಕೌಶಲ್ಯಗಳನ್ನು ಸಹ ಅಭಿವೃದ್ಧಿಪಡಿಸುತ್ತದೆ. ತುರ್ತು ಪರಿಸ್ಥಿತಿಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಹಾಗಾಗಿ ಅಪರಾಧಿಗಳನ್ನು ನಿಭಾಯಿಸುವ ಮಾರ್ಗಗಳನ್ನು ತರಬೇತಿದಾರರಿಗೆ ಕಲಿಸಲಾಗುತ್ತದೆ" ಎಂದು ಅವರು ಹೇಳಿದರು.

ಹೆಣ್ಣು ಮಕ್ಕಳಿಗೆ ತರಬೇತಿ ನೀಡುವ ವೇಳೆ ಬಾಲಕರಿಗೆ ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸುವಂತೆ ಸಲಹೆ ನೀಡಲಾಗಿದೆ. ರಾಣಿ ಲಕ್ಮೀಬಾಯಿ ಸ್ವಯಂರಕ್ಷಣೆ ತರಬೇತಿ ಯೋಜನೆಯಡಿ ಈ ತರಬೇತಿ ನೀಡಲಾಗುತ್ತದೆ. ಈ ತರಬೇತಿ ನೀಡಿದ ಫೋಟೋಗಳನ್ನು ಶಗುಣ್ ಪೋರ್ಟ ಲ್ ನಲ್ಲಿ ಶಾಲಾ ಕಾಲೇಜುಗಳು ಅಪ್‌ಲೋ್ ಮಾಡಬೇಕಾಗುತ್ತದೆ.

For Quick Alerts
ALLOW NOTIFICATIONS  
For Daily Alerts

English summary
Self defence classes for girls in karnataka govt school and pu colleges will begins from first week of january.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X