ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನಲ್ಲಿ 100 ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಮಾರ್ಚ್ 4,2022 ರಿಂದ ಮಾರ್ಚ್ 24,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಕಾನೂನು ಪದವಿ/ಸ್ನಾತಕೋತ್ತರ ಪದವಿ/ಸಿಎ/ಸಿಎಸ್/ಸಿಡಬ್ಲ್ಯೂಎ/ಸಿಎಫ್ಎ ಅಥವಾ ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅವಕಾಶ ನೀಡಲಾಗಿತ್ತು.
ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾರ್ಚ್ 4,2022 ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆಯನ್ನು ಏಪ್ರಿಲ್ 16,2022ರಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಎಸ್‌ಐಡಿಬಿಐ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?
ಸ್ಟೆಪ್ 1 : ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.sidbi.in/en ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4 : ಸ್ಕ್ರೀನ್ ಮೇಲೆ ಪ್ರವೇಶ ಪತ್ರ ಮೂಡುವುದು
ಸ್ಟೆಪ್ 5 : ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











