2018 ರಿಂದ ಎಂಜಿನಿಯರಿಂಗ್ ಏಕರೂಪ ಪ್ರವೇಶ ಪರೀಕ್ಷೆ

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರಿಕ್ಷೆ (ನೀಟ್‌)ಯನ್ನು ಜಾರಿ ಮಾಡಿರುವ ರೀತಿಯಲ್ಲೇ ಇಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕೂ ಏಕರೂಪ ಪ್ರವೇಶ ಪರೀಕ್ಷೆ ನಡೆಸವ ಯೋಜನೆಗೆ ಅನುಮೋದನೆ ದೊರೆತಿದೆ.

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರಿಕ್ಷೆ (ನೀಟ್‌)ಯನ್ನು ಜಾರಿ ಮಾಡಿರುವ ರೀತಿಯಲ್ಲೇ ಇಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕೂ ಏಕರೂಪ ಪ್ರವೇಶ ಪರೀಕ್ಷೆ ನಡೆಸುವ ಯೋಜನೆಗೆ ಅನುಮೋದನೆ ದೊರೆತಿದೆ.

2010 ರಲ್ಲೇ ದೇಶಾದ್ಯಂತ ವೃತ್ತಿಪರ ಶಿಕ್ಷಣಕ್ಕೆ ಏಕರೂಪ ಸಿಇಟಿ ನಡೆಸಲು ಯೋಜನೆ ಸಿದ್ಧಪಡಿಸಲಾಗಿತ್ತು. ಆಗಿನಿಂದಲೂ ಸಿದ್ಧತೆ ನಡೆಸಿದ್ದು 2016 ರಲ್ಲಿ ಏಕರೂಪ ಪ್ರವೇಶ ಪರೀಕ್ಷೆಯನ್ನು 2018 ರಿಂದ ಜಾರಿಗೊಳಿಸುವುದಾಗಿ ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟಪಡಿಸಿತು.

2018 ಕ್ಕೆ ಜಾರಿ

2013ನೇ ಇಸವಿಯಲ್ಲೇ ಜಾರಿಯಾಗಬೇಕಿದ್ದ ಯೋಜನೆ ಹಲವು ಕಾರಣಗಳಿಂದ ನಿಂತುಹೋಗಿತ್ತು. ಜೆಇಇ ಮೂಲಕ ದೇಶದ ವಿವಿಧ ಕಾಲೇಜುಗಳಿಗೆ ಪ್ರವೇಶ ನೀಡಲಾಗುತ್ತಿದ್ದಾರೂ ಅನೇಕ ರಾಜ್ಯಗಳು ಏಕರೂಪ ಸಿಇಟಿಗೆ ಒಪ್ಪಿಗೆ ಸೂಚಿಸಿರಲಿಲ್ಲ.

ಏಕರೂಪ ಪ್ರವೇಶ ಪರೀಕ್ಷೆ

ಇಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕೆ ಈಗಿರುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಬದಲು ಏಕರೂಪ ಪ್ರವೇಶ ಪರೀಕ್ಷೆ ನಡೆಸುವ ಕುರಿತಂತೆ ಮಾನವ ಸಂಪನ್ಮೂಲ ಸಚಿವಾಲಯ ಉನ್ನತ ಮಟ್ಟದ ಸಮಾಲೋಚನೆ ನಡೆಸಿದ್ದು ಅದಕ್ಕೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ (ಎಐಸಿಟಿಇ) ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಸಮರ್ಪಕವಾಗಿ ನಡೆಸಲಾಗುತ್ತಿಲ್ಲ ಎಂಬ ದೂರುಗಳು ಕೇಳಿಬಂದಿದ್ದವು. ಹೀಗಾಗಿ ಪ್ರವೇಶ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆಗಟ್ಟಿ ಪಾರದರ್ಶಕತೆಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸದ್ಯ ಸಿಬಿಎಸ್‌ಇ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ನಡೆಸುತ್ತಿದ್ದು, ವಿದ್ಯಾರ್ಥಿಗಳು ವಿವಿಧ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಎಐಸಿಟಿಇ ಅನುಮೋದನೆ

ಎಂಜಿನಿಯರಿಂಗ್ ಕೋರ್ಸುಗಳಿಗೆ ದೇಶಾದ್ಯಂತ ಏಕರೂಪ ಪ್ರವೇಶ ಪರೀಕ್ಷೆ 2018 ರಿಂದ ಆರಂಭವಾಗಲಿದೆ. ಈ ಸಂಬಂಧ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು ಅನುಮೋದನೆ ನೀಡಿದೆ. ಅಲ್ಲದೇ ಎಂಜಿನಿಯರಿಂಗ್ ಶಿಕ್ಷಣ ಸುಧಾರಿಸಲು ಪ್ರತಿ ವರ್ಷ ಪಠ್ಯಕ್ರಮ ಪರಿಷ್ಕರಣೆ, ಹೊಸ ಕೋರ್ಸುಗಳ ಅಳವಡಿಕೆ, ಶಿಕ್ಷಕರಿಗೆ ತರಬೇತಿ ಇತ್ಯಾದಿಗಳನ್ನು ಒಳಗೊಂಡ ಪ್ಯಾಕೇಜಿಗೂ ಎಐಸಿಟಿಇ ಅನುಮೋದನೆ ನೀಡಿದೆ. ಏಕರೂಪದ ಪ್ರವೇಶ ಪರೀಕ್ಷೆಯಿಂದಾಗಿ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಗಳು ರದ್ದಾಗಲಿದ್ದು, ದೇಶಕ್ಕೊಂದೆ ಸಿಇಟಿ ಇರಲಿದೆ. ಇದರಿಂದ ವಿದ್ಯಾರ್ಥಿಗಳು ಬೇರೆ ಬೇರೆ ಪ್ರವೇಶ ಪರೀಕ್ಷೆ ಬರೆಯುವುದು ತಪ್ಪುತ್ತದೆ

ಏಕರೂಪ ಸಿಇಟಿಗೆ ವಿರೋಧ

ಈ ಹಿಂದೆ ಏಕರೂಪ ಸಿಇಟಿಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದು ಮಾರಕವಾಗಿ ಪರಿಣಮಿಸಲಿದೆ ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದರು. ಇನ್ನು ಏಕರೂಪ ಸಿಇಟಿ ಬಂದರೆ ಪಠ್ಯಕ್ರಮದಲ್ಲೂ ಅನೇಕ ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ ಅಲ್ಲದೆ ಏಕರೂಪ ಸಿಇಟಿ ಕೇಂದ್ರ ಮತ್ತು ರಾಜ್ಯ ಅನುಸರಿಸುತ್ತಿರುವ ಮೀಸಲು ನೀತಿಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ ಅನೇಕ ರಾಜ್ಯ ಸರ್ಕಾರಗಳು ಮತ್ತು ಇಂಜಿನಿಯರಿಂಗ್ ಕಾಲೇಜುಗಳು ವಿರೋಧ ವ್ಯಕ್ತಪಡಿಸಿದ್ದವು.

ಇದನ್ನು ಗಮನಿಸಿ: ಜೆಇಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಲಭ್ಯ

More News  

For Quick Alerts
ALLOW NOTIFICATIONS  
For Daily Alerts

English summary
Single entrance examination for admission to all engineering colleges, including private institutions, across the country.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+