Smart India Hackthon 2020: ಆಲ್ ಇಂಡಿಯಾ ಕೌನ್ಸಿಲ್ ಆಫ್ ಟಿಕ್ನಿಕಲ್ ಎದುಕೇಶನ್ (ಎಐಸಿಟಿಇ) ಆಯೋಜಿಸಿದ್ದ 'ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್'ನ ಗ್ರ್ಯಾಂಡ್ ಫಿನಾಲೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ಸಂಜೆ 4:30ಕ್ಕೆ ಭಾಷಣ ಮಾಡಿದರು.

ಎಐಸಿಟಿಇ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಅಭಿಯಾನದಡಿ ದೇಶಾದ್ಯಂತ ಸ್ಪರ್ಧೆಯನ್ನು ಆಯೋಜಿಸಿತ್ತು. 2017ರಲ್ಲಿ ಮೊದಲು 42 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು. 2018ರಲ್ಲಿ ಇದು ಒಂದು ಲಕ್ಷಕ್ಕೆ ಏರಿಕೆಯಾಗಿತ್ತು, 2019ರಲ್ಲಿ ಎರಡು ಲಕ್ಷಕ್ಕೆ ಏರಿಕೆಯಾಗಿತ್ತು. ಇದೀಗ ಈ ವರ್ಷ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ನಲ್ಲಿ ಬರೋಬ್ಬರಿ ನಾಲ್ಕೂವರೆ ಲಕ್ಷ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿದ ಮೋದಿಯವರು ಯುವ ವಿಜ್ಞಾನಿಗಳ ಐಡಿಯಾಗಳನ್ನು ಆಲಿಸಿದರು. ದೇಶಾದ್ಯಂತ ಭಾಗವಹಿಸಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಪೈಕಿ ಆಯ್ದ ವಿಭಿನ್ನ ಪ್ರಾಜೆಕ್ಟ್‌ಗಳ ಕುರಿತು ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಂಚಿಕೊಂಡರು.


Click it and Unblock the Notifications











